ಬೆಂಗಳೂರು:- ಗುತ್ತಿಗೆದಾರ ಸಚಿವ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವಹಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಬಾಗಲಕೋಟೆ: ಶ್ರೀ ಗುರುದೇವ ಬ್ರಹ್ಮಾನಂದ ಉತ್ಸವ ನೋಡಲು ಎರಡು ಕಣ್ಣು ಸಾಲದು!
ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ, ಸರಣಿ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಹಿಂದೆಂದೂ ನೋಡಿರಲಿಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ. ಸಹೋದರಿಯರು ದೂರು ಕೊಡಲು ಹೋದಾಗ 12 ಗಂಟೆಗಳ ಕಾಲ ಪೊಲೀಸರು ಏನೂ ತಲೆಕೆಡಿಸಿಕೊಂಡಿಲ್ಲ, ಹೆಣ್ಣುಮಕ್ಕಳಿಗೆ ಹೀಯಾಳಿಸಿ ಅಪಮಾನ ಮಾಡಿ ಪೊಲೀಸರು ನಿಂದಿಸಿರುವುದು ಅಪರಾಧ ಎಂದರು.
ಕಲಬುರಗಿ ಜಿಲ್ಲೆಯ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ, ಕಲಬುರಗಿ ಜಿಲ್ಲೆ ಯಾರ ಕಪಿಮುಷ್ಠಿಯಲ್ಲಿದೆ ಎಂದು ಬಸ್ ನಿಲ್ದಾಣದಲ್ಲಿ ನಿಂತು ಕೇಳಿದರೂ ಹೇಳುತ್ತಾರೆ ಎಂದರು. ಕಾಂಗ್ರೆಸ್ನವರು ಬೆಳಗಿನ ಜಾವ 2-3 ಗಂಟೆಗೆ ಸಚಿನ್ ಕುಟುಂಬದವರನ್ನು ಭೇಟಿ ಮಾಡುತ್ತಾರೆ, ಕಾಂಗ್ರೆಸ್ನವರು ಹಗಲು ಕಾರ್ಯಾಚರಣೆ ಮಾಡುವುದಿಲ್ಲ. ಕುಟುಂಬಕ್ಕೆ ಸಮಾಧಾನ ಮಾಡಿ ಆಗದಿದ್ದರೆ ಬೆದರಿಕೆ ಹಾಕುತ್ತಾರೆ, ಇಡಿ ಕಲಬುರಗಿ ಜಿಲ್ಲೆಯ ಪೊಲೀಸ್ ಖರ್ಗೆ ಕುಟುಂಬದ ಹಿಡಿತದಲ್ಲಿದೆ ಎಂದರು.
ಸಚಿನ್ ಆತ್ಮಹತ್ಯೆ ಪ್ರಕರಣ ಸಿಬಿಐ ತನಿಖೆಯಾಗಬೇಕು, ಇದು ಸಚಿನ್ ಕುಟುಂಬದ ಒತ್ತಾಯ ಕೂಡ, ಪ್ರಿಯಾಂಕ್ ಖರ್ಗೆ ಎಷ್ಟು ಮೇಧಾವಿಯೋ ಅಷ್ಟೇ ಮರೆವು ಜಾಸ್ತಿ. ಹಿಂದೆ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕೆಎಸ್ ಈಶ್ವರಪ್ಪ, ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆಜೆ ಜಾರ್ಜ್ ರಾಜೀನಾಮೆ ನೀಡಿದ್ದರು.
ಕ್ಲೀನ್ ಚಿಟ್ ಸಿಕ್ಕಿದ ಮೇಲೆ ಜಾರ್ಜ್ ಮತ್ತೆ ಸಚಿವರಾದರು, ವಾಲ್ಮೀಕಿ ನಿಗಮದಲ್ಲಿ ನಾಗೇಂದ್ರ ರಾಜೀನಾಮೆ ನೀಡಿದರು, ಇದನ್ನು ಪ್ರಿಯಾಂಕ್ ಖರ್ಗೆ ಮರೆಯಬಾರದು, ಸಿಎಂ ಕೂಡಲೇ ಪ್ರಿಯಾಂಕ್ ಖರ್ಗೆಯಿಂದ ರಾಜೀನಾಮೆ ಪಡೆಯಬೇಕು, ಸಚಿನ್ ಕುಟುಂಬಕ್ಕೆ ಸರ್ಕಾರ ಭದ್ರತೆ ನೀಡಬೇಕು, ಹಾಗೂ ಅವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಬೇಕು ಹಾಗೂ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕೆಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.