ಬೆಂಗಳೂರು: ಬೀದರ್ನ ಯುವ ಗುತ್ತಿಗೆದಾರ ಸಚಿನ್ ಪ್ರಕರಣದ ವಿವಾದ ದಿನದಿಂದ ದಿನಕ್ಕೆ ಜೋರಾಗ್ತಿದೆ. ಸಚಿನ್ ಜೀವ ತೆಗೆದುಕೊಳ್ಳುವುದಕ್ಕೂ ಮುನ್ನ ಬರೆದಿಟ್ಟಿರಿವ ನೋಟ್ ಅನ್ನೇ ಅಸ್ತ್ರ ಮಾಡಿಕೊಂಡ ಬಿಜೆಪಿ, ಸಚಿವ ಪ್ರಿಯಾಂಕ್ ಖರ್ಗೆಯ ತಲೆದಂಡಕ್ಕೆ ಪಟ್ಟು ಹಿಡಿದು ದೊಡ್ಡ ಮಟ್ಟದ ಹೋರಾಟಕ್ಕೆ ಮುಂದಾಗಿದೆ. ಇದರ ಬೆನ್ನಲ್ಲೇ ಸಚಿನ್ ನಿವಾಸಕ್ಕೆ ಬಿಜೆಪಿ ನಿಯೋಗ ಭೇಟಿ ನೀಡುವ ಮೊದಲೇ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಮೃತ ಸಚಿನ್ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದಾರೆ.
ಕುಟುಂಬಸ್ಥರ ಭೇಟಿ ಬಳಿಕ ಮಾಧ್ಯಮದವರ ಜೊತೆಗೆ ಮಾತಾಡಿದ ಖಂಡ್ರೆ, ಸಚಿನ ಆತ್ಮಹತ್ಯೆ ಒಂದು ನೋವಿನ ಸಂಗತಿಯಾಗಿದೆ. ಇದು ಖೇದಕರ ಸಂಗತಿ. ನಾನು ನಮ್ಮ ಸರಕಾರ ಸಚಿನ್ ಕುಟುಂಬಸ್ಥರ ಜೊತೆಗೆ ಇದ್ದೇವೆ. ನಾನು ಸಚಿನ್ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದ್ದೇನೆ.
Health Tips: ಚಳಿಗಾಲದಲ್ಲಿ ದಿನಕ್ಕೊಂದು ಕ್ಯಾರೆಟ್ ತಿನ್ನುವುದರಿಂದ ಆಗುವ ಲಾಭಗಳೇನು ಗೊತ್ತಾ..?
ಸಚಿನ್ ಆತ್ಮಹತ್ಯೆ ಕೇಸ್ ನಿರ್ಲಕ್ಷ್ಯ ಮಾಡಿದ ಪೊಲೀಸರು ಮೇಲೆ ಕ್ರಮವಾಗುತ್ತೆ. ಈ ಕೇಸ್ ರೈಲ್ವೇ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಕೇಸ್ ತನಿಕೆ ನ್ಯಾಯಯುತವಾಗಿ ನಡೆಯುತ್ತೆ. ಈ ಪ್ರಕರಣದಲ್ಲಿ ಯಾರೇ ಇರಲಿ ಅವರ ಮೇಲೆ ಕಾನೂನು ರೀತಿ ಕ್ರಮವಾಗುತ್ತದೆ. ಸಚಿನ್ ಕುಟುಂಬಕ್ಕೆ ಸರಕಾರ ಹಾಗೂ ಖಾಸಗಿಯಾಗಿ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.