ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಸಂಬಂಧ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಕೆಲವು ಮಂತ್ರಿಗಳು ತಮ್ಮ ಬಲಗೈ ಬಂಟರು ಹಾಗೂ ಆಪ್ತ ಸಹಾಯಕರಿಗೆ ಜನರಲ್ ಪವರ್ ಆಫ್ ಅಟಾರ್ನಿ (GPA) ನೀಡಿದಂತಿದೆ. ಇತ್ತೀಚೆಗಷ್ಟೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆಪ್ತಸಹಾಯಕನ ಕಿರುಕುಳಕ್ಕೆ ತಹಸೀಲ್ದಾರ್ ಕಚೇರಿಯ ಎಸ್ಡಿಎ ರುದ್ರೇಶ್ ಆತ್ಮಹತ್ಯೆ,
ಇದರ ಬೆನ್ನಲ್ಲೇ ವಿಧಾನ ಮಂಡಲದ ಸುವರ್ಣ ಸೌಧಕ್ಕೆ ನುಗ್ಗಿ ಶಾಸಕರಾದ ಸಿಟಿ ರವಿ ಅವರ ಮೇಲೆ ಗೂಂಡಾಗಿರಿ ಪ್ರದರ್ಶಿಸಿದ್ದ ಸುದ್ದಿ ಹಸಿಯಾಗಿರುವಾಗಲೇ ಇಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರನ ಕಿರುಕುಳ ಹಾಗೂ ಬೆದರಿಕೆಯಿಂದ ತತ್ತರಿಸಿದ್ದ ಬೀದರ್ ನ ಗುತ್ತಿಗೆದಾರ ಸಚಿನ್ ಸುದೀರ್ಘ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೋಟೆಲ್ ಗೆ ಕರೆಸಿ ಪ್ರಿಯಕರನ ಮರ್ಮಾಂಗ ಕತ್ತರಿಸಿದ ಪ್ರಿಯತಮೆ..! ಮುಂದೇನಾಯ್ತು..?
ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಜೊತೆಗೆ ಆತ್ಮಹತ್ಯೆಯ ಭಾಗ್ಯವನ್ನೂ ಕರುಣಿಸಿ ನತದೃಷ್ಟ ಕುಟುಂಬಗಳನ್ನು ಅನಾಥವಾಗಿಸಲು ಹೊರಟಿದೆ. ಪ್ರತಿಯೊಂದು ವಿಷಯದಲ್ಲೂ ಅನಗತ್ಯ ಮೂಗು ತೂರಿಸಿ ತಮ್ಮ ನಡೆ, ನುಡಿಗಳಲ್ಲಿ ದಾಷ್ಟ್ಯತನ ಪ್ರದರ್ಶಿಸುವ ಸಚಿವ ಪ್ರಿಯಾಂಕ್ ಖರ್ಗೆ ಈ ಸಾವಿಗೆ ಹೊಣೆಗಾರರಾಗಿದ್ದಾರೆ ಎಂಬುದು ಆತ್ಮಹತ್ಯೆಗೊಳಗಾದ ದುರ್ದೈವಿ ಗುತ್ತಿಗೆದಾರ ಸಚಿನ್ ಬರೆದಿರುವ ಪತ್ರದಲ್ಲಿ ಸ್ಪಷ್ಟವಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೂಡಲೇ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಪಡೆಯಲಿ ಎಂದು ಆಗ್ರಹಿಸಿದ್ದಾರೆ.