ಹುಬ್ಬಳ್ಳಿ: ಇತ್ತೀಚಿನ ದಿನಗಳಲ್ಲಿ ಮತಾಂತರ ಪ್ರಕ್ರಿಯೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲದೇ ಹೋದರೆ ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ, ಹಳ್ಳಿ ಹಳ್ಳಿಗಳಲ್ಲಿ ಮತಾಂತರ ಹೆಚ್ಚಾಗುತ್ತಿದೆ.
ಕಳೆದ 2-3 ಚಿಕ್ಕಬಳ್ಳಾಪುರ, ಚಿತ್ರದುರ್ಗದಲ್ಲಿ ಮುಸ್ಲಿಂ ಮತಾಂತರ ಮಾಡಿದ್ದಾರೆ. ಅಬ್ಬಾಸ್ ಎಂಬಾತನೇ ಮುಸ್ಲಿಂ ಮತಾಂತರ ಮಾಡಿದ್ದಾನೆ. ಕುರುಬ ಸಮೂದಾಯದ ಯುವಕನನ್ನು ಮುಸ್ಲಿಂ ಸಮೂದಾಯಕ್ಕೆ ಮತಾಂತರ ಮಾಡಲಾಗಿದೆ. ಇದನ್ನು ಶ್ರೀರಾಮ ಸೇನೆ ತೀವ್ರವಾಗಿ ಖಂಡಿಸುತ್ತದೆ ಎಂದು ಹರಿಹಾಯ್ದರು. ರಾಜ್ಯದಲ್ಲಿ ವಾಸಕ್ಕಾಗಿ ಅವಕಾಶ ಮಾಡಿಕೊಡಲಾಗಿದೆ.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
ಆದರೆ ಇವರು ಮತಾಂತರ ನಿಷೇಧ ಕಾಯಿದೆಯನ್ನು ಗಾಳಿಗೆ ತೂರಿ ಮತಾಂತರ ಪ್ರಕ್ರಿಯೆಯಲ್ಲಿ ಕೆಲವು ದುಷ್ಟರು ತೊಡಗಿದ್ದಾರೆ. ಇದು ಮುಂದಿನ ದಿನಗಳಲ್ಲಿ ಸಂಘರ್ಷಕ್ಕೆ ಇಳಿಯುವ ಮಾನಸಿಕತೆಗೆ ತರುತ್ತದೆ ಎಂದರು. ಸದ್ಯ ಮುಸ್ಲಿಂ, ಕ್ರೈಸ್ತ ಸಮೂದಾಯದ ಜನರು ರಾಜ್ಯದಲ್ಲಿ ತಮ್ಮದೇ ಸರ್ಕಾರ ಬಂದಿದೆ ಎಂಬಂತೆ ಸೊಕ್ಕಿನಿಂದ ವರ್ತನೆ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಮತಾಂತರ ಮಾಡುವುದು ಅಪಾಯಕಾರಿ. ಇದು ನಿಲ್ಲಬೇಕು. ಇಲ್ಲದೇ ಹೋದಲ್ಲಿ ಸಂಘಟನೆಯಿಂದ ಬೀದಿಗಿಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.