ಚಿಕ್ಕಮಗಳೂರು: ಪಶ್ಚಿಮಘಟ್ಟ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ಪಡೆಯ ಕೂಂಬಿಂಗ್ ಕಾರ್ಯಾಚರಣೆ ಮುಂದುವರೆದಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸುತ್ತಿನಗುಡ್ಡ, ಕಿಗ್ಗಾ, ಕೆರೆಕಟ್ಟೆ ಅರಣ್ಯದಲ್ಲಿ ಐವರು ನಕ್ಸಲರು ಓಡಾಡಿರುವ ಶಂಕೆ ವ್ಯಕ್ತವಾಗಿದ್ದು, ನಕ್ಸಲರಿಗಾಗಿ ಹುಡಕಾಟ ನಡೆದಿದೆ. ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಮಾಡಲಾಗುತ್ತಿದೆ. ಕೊಪ್ಪ ತಾಲೂಕಿನ ಮುಂಡಗಾರು ಲತಾ, ಕಳಸ ತಾಲೂಕಿನ ಬಾಳೆಹೊಳೆಯ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಗ್ರಾಮದ ಸುಂದರಿ, ರಾಯಚೂರು ಮೂಲದ ಜಯಣ್ಣ ಮತ್ತು ಶೃಂಗೇರಿ ತಾಲೂಕಿನ ಹಿತ್ತಲಮನೆಯ ರವೀಂದ್ರ ಅರಣ್ಯಗಳಲ್ಲಿ ಅಡಗಿರುವ ಸಾಧ್ಯತೆ ಇದೆ. ಕಳೆದ 4 ದಿನಗಳಿಂದ ಎಎನ್ಫ್ ಅಧಿಕಾರಿಗಳು ನಕ್ಸಲರಿಗಾಗಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.