ಕಲಘಟಗಿ: ಗ್ರಾಮೀಣ ಭಾಗದಲ್ಲಿ ಸಹಕಾರಿ ಕ್ಷೇತ್ರವನ್ನು ಬಲಪಡಿಸುವ ಉದ್ದೇಶದಿಂದ ನವೆಂಬರ್ 17 ಕಲಘಟಗಿಯ ಹನ್ನೆರಡು ಎತ್ತಿನ ಮಠದ ಆವರಣದಲ್ಲಿ ಸಹಕಾರಿ ಸಪ್ತಾಹ ನಡೆಯಲಿದೆ ಎಂದು ರಾಜ್ಯ ಸಂಯುಕ್ತ ಸಹಕಾರಿ ಸಂಘಗಳ ಅಧ್ಯಕ್ಷರಾದ ಜಿ.ನಂಜನಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಸಚಿವ ಸಂತೋಷ್ ಲಾಡ್ ಅವರ ಪ್ರೋತ್ಸಾಹದಿಂದ ಈ ಕಾರ್ಯಕ್ರಮ ಕಲಘಟಗಿಯಲ್ಲಿ ಆಯೋಜನೆಗೊಂಡಿದೆ ಎಂದು ಕೆಸಿಸಿ ಬ್ಯಾಂಕಿನ ನಿರ್ದೇಶಕರಾದ ಮಂಜುನಾಥ್ ಮುರಳ್ಳಿ ತಿಳಿಸಿದರು.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಸಹಕಾರ ಸಚಿವರಾಗಿರುವ ಕೆ. ರಾಜಣ್ಣನವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದೂ ಕೇಂದ್ರ ಸಚಿವರಾಗಿರುವ ಪ್ರಹ್ಲಾದ ಜೋಷಿ, ಕಾರ್ಮಿಕ ಸಚಿವ ಸಂತೋಷ್ ಲಾಡ್, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಬೆಳಗಾವಿ ವಲಯದ ಜಂಟಿ ನಿಬಂಧಕರಾದ ಸುರೇಶ್ ಗೌಡ ಪಾಟೀಲ್, ಸಹಕಾರಿ ಕ್ಷೇತ್ರಗಳ ನಿರ್ದೇಶಕರಾದ ಮಲ್ಲಿಕಾರ್ಜುನ ಹೊರಕೇರಿ, ಕೆಸಿಸಿ ಬ್ಯಾಂಕಿನ ಮುಖ್ಯಾಧಿಕಾರಿ ಕೆ.ಮುನಿಯಪ್ಪ ಮತ್ತು ಸಚಿವ ಸಂತೋಷ್ ಲಾಡ್ ಅವರ ಆಪ್ತ ಸಹಾಯಕರಾದ ಸೋಮಶೇಖರ್ ಬೆನ್ನುರ್, ಹರಿಶಂಕರ್ ಮಠದ್, ಹಾಗೂ ಬಾಳು ಖಾನಾಪುರ ಉಪಸ್ಥಿತರಿದ್ದರು.
ವರದಿ, ಮಾರುತಿ ಲಮಾಣಿ