ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಭೀತಿ ಹಿನ್ನೆಲೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಮಾಸ್ಕ್ ಹಾಕದವರಿಗೆ ಪೊಲೀಸರು ದಂಡದ ಬಿಸಿ ಮುಟ್ಟಿಸಿದ್ದಾರೆ. ನಗರದ ಅತ್ತಿಬೆಲೆ ಬಸ್ ನಿಲ್ದಾಣದಲ್ಲಿ ಮಾಸ್ಕ್ ಧರಿಸಿದೆ ರಾಜರೊಷವಾಗಿ ಓಡಾಡುತ್ತಿದ್ದ ಜನರಿಗೆ 100 ರೂಪಾಯಿ ದಂಡ ವಿಧಿಸಿಲಾಗಿದ್ದು, ಅತ್ತಿಬೆಲೆ ಪುರಸಭೆ ಸಿಇಓ ಶ್ವೇತ ಅವರು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಕೊವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊವಿಡ್ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಜನರಿಗೆ ಸಲಹೆ ನೀಡಿದ್ದರು.
