ಬೆಂಗಳೂರು: ರೂಪಾಂತರಿ ಕೊರೊನಾ ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸುತ್ತೇವೆ ಎಂದು ಸಚಿವ ಸುಧಾಕರ್ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ನಿಯಂತ್ರಣ ಮಾಡಲು ಅಧಿಕಾರಿಗಳಿಗೆ ಹಲವು ಜವಾಬ್ದಾರಿ ಕೊಟ್ಟಿದ್ದು,
ಎಲ್ಲಾ ಅಧಿಕಾರಿಗಳ ಸಮನ್ವಯ ಕುರಿತು ಸಭೆ ಮಾಡಲಾಗಿದೆ ಎಂದು ಹೇಳಿದರು. ಅಲ್ಲದೇ ಕಳೆದ ಎರಡು ಅಲೆಗಳ ವೇಳೆ ಅನುಭವ ಪಡೆದ ಅಧಿಕಾರಿಗಳು ಈ ಬಾರಿ ಯಾವುದೇ ಲೋಪ ಆಗದಂತೆ ಕೆಲಸ ಮಾಡಲಿದ್ದಾರೆ. ಹೀಗಾಗಿ ಮೂರನೇ ಅಲೆ ಎದುರಿಸಲು ಸರ್ಕಾರ ತಯಾರಿ ನಡೆಸಿದೆ ಎಂದು ಸಚಿವ ಸುಧಾಕರ್ ಹೇಳಿಕೆ ನೀಡಿದ್ದಾರೆ.
