ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆ ಆದರೆ ಬೆಂಗಳೂರು ಹಾಟ್ ಸ್ಪಾಟ್ ಆಗುವ ಭಯದ ಹಿನ್ನೆಲೆಯಲ್ಲಿ ಈಗಾಗಲೇ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕಳೆದ ಮೂರು ಅಲೆಗಳಲ್ಲೂ ಕರ್ನಾಟಕದ ಒಟ್ಟು ಕೊವಿಡ್ (COVID 19) ಕೇಸ್ಗಳ ಪಟ್ಟಿಯಲ್ಲಿ ಬೆಂಗಳೂರಿನದ್ದು ಬಹುಪಾಲು. ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣ ಮಾಡಲು ಮತ್ತು ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಸಭೆ ಮೇಲೆ ಸಭೆ ಮಾಡುತ್ತಿದೆ
ಹಾಗೆ ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ತುರ್ತು ಸುದ್ದಿಗೋಷ್ಠಿ ಕರೆದಿರುವ ಸಿಎಂ ಸಿದ್ದರಾಮಯ್ಯನವರು ಮಹತ್ವದ ಕೋವಿಡ್ ಸಭೆ ನಡೆಸಲಿದ್ದಾರೆ.
ಸಚಿವ ದಿನೇಶ್ ಗುಂಡೂರಾವ್, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ TAC ಸಮಿತಿಯ ಜೊತೆ ಸಿಎಂ ಸಿದ್ಸದರಾಮಯ್ಯ ಸಭೆ ನಡೆಸಲಿದ್ದು ಮುಂದಿನ ಎಚ್ಚರಿಕೆಗಳ ಬಗ್ಗೆ ನಿಲುವು ತೆಗೆದುಕೊಳ್ಳಲು ಮಹತ್ವದ ಸಭೆಯಾಗಲಿದೆ.
ಕೊವಿಡ್ ಮೀಟಿಂಗ್ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಭಾಗಿಯಾಗಲಿದ್ದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಮಹತ್ವದ ಸಭೆ.
ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಯನ್ನ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ಏನೆಲ್ಲ ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಳ್ಳಬಹುದು ಎಂಬ ಬಗ್ಗೆ ಸಿಎಂ ಸಭೆ ಒಟ್ಟಾರೆ ರಾಜ್ಯದಲ್ಲಿನ ಪರಿಸ್ಥಿತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಿರುವ ಸಿಎಂ ಸಿದ್ದರಾಮಯ್ಯ.. ಒಂದಷ್ಟು ಟಫ್ ರೂಲ್ಸ್ ಗಳು ಜಾರಿಯಾಗುವ ಸಾಧ್ಯತೆ ಅಂತೂ ಇದ್ದೇ ಇದೆ.