ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 74ಜನರಲ್ಲಿ ಕೊರೊನಾ ಪತ್ತೆಯಾಗಿದೆ. ಕಳೆದ 24 ಘಂಟೆಯಲ್ಲಿ ಇಬ್ಬರು ಬಲಿ, ಮೈಸೂರು, ದಕ್ಷಿಣ ಕನ್ನಡ ಒಬ್ಬೊಬ್ಬರು ಬಲಿಯಾಗಿದ್ದಾರೆ.
ಬೆಂಗಳೂರಿನಲ್ಲಿ 57 ಪ್ರಕರಣ ವರದಿಯಾಗಿದೆ. 6403 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಬೆಂಗಳೂರಿನಲ್ಲಿ 2104 ಕೋವಿಡ್ ಟೆಸ್ಟ್ ಮಾಡಲಾಗಿತ್ತು. ರಾಜ್ಯದ ಕೋವಿಡ್ ಪಾಸಿಟಿವಿಟಿ ರೇಟ್ 1.15%ಗೆ ಇಳಿಕೆ ಆಗಿದೆ.
ಕಳೆದ 24 ಗಂಟೆಯಲ್ಲಿ 44 ಜನ ಕೊರೊನಾ ಸೋಂಕಿನಿಂದ ಗಣಮುಖವಾಗಿದ್ದು, ರಾಜ್ಯದಲ್ಲಿರುವ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 464 ಏರಿಕೆ ಆಗಿದೆ. ಹೋಮ್ ಐಸೊಲೇಷನ್ ನಲ್ಲಿರುವ 423 ಸೋಂಕಿತರು, 41 ಸೋಂಕಿತರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ