ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 279 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಮೂವರು ಸೋಂಕಿತರು ಮೃತಪಟ್ಟಿದ್ದಾರೆ.
ಮೃತ ಪ್ರಕರಣಗಳ ಪೈಕಿ ಮೈಸೂರು ಜಿಲ್ಲೆಯಲ್ಲೇ ಎರಡು ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿ ಒಂದು ಸಾವು ಪ್ರಕರಣ ದಾಖಲಾಗಿದೆ.
killed her son: ಗೋವಾದಲ್ಲಿ ಮಗನನ್ನು ಕೊಂದ ಸುಚನಾ ಸೇಠ್ ಯಾರು? – ಹಿನ್ನೆಲೆ ಏನು?
ಬೆಂಗಳೂರಿನಲ್ಲಿ ಇಂದು 134 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 6,359 ಜನರನ್ನು ಕೊವೀಡ್ ಟೆಸ್ಟ್ಗೆ ಒಳಪಡಿಸಲಾಗಿದ್ದು, 279 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇಂದು 235 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ 1,222 ಸಕ್ರಿಯ ಕೊರೋನಾ ಸೋಂಕು ಪ್ರಕರಣಗಳಿವೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡ 4.38ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.