ಕೋಲಾರ: ಬಂಗಾರಪೇಟೆ ತಾಲ್ಲೂಕು ಹುಣಸನಹಳ್ಳಿ ಬಳಿ ಇರುವ ಮಾನ್ಯತಾ ಇಂಟರ್ನ್ಯಾಷನಲ್ ನರ್ಸಿಂಗ್ ಕಾಲೇಜಿನ ನರ್ಸಿಂಗ್ ಕಾಲೇಜಿನ ಐವರು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇವರೆಲ್ಲರೂ ಪಶ್ಚಿಮ ಬಂಗಾಳದಿಂದ ಬಂದವರು ಎಂದು ತಿಳಿ ದು ಬಂದಿದೆ. ಆರೋಗ್ಯ ಇಲಾಖೆಯು ಕಾಲೇಜಿನ 118 ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಿದೆ.
ಮಾನ್ಯತಾ ನರ್ಸಿಂಗ್ ಕಾಲೇಜನ್ನು ಕಂಟೇನ್ಮೆಂಟ್ ಜೋನ್ ಎಂದು ಗ್ರಾಮ ಪಂಚಾಯಿತಿ ಅಧಿಕಾರಿಗಳು ಘೋಷಿಸಿದ್ದಾರೆ. ಆದರೆ ಇದಕ್ಕೆ ಕಾಲೇಜು ಆಡಳಿತ ಮಂಡಳಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ನಂತರ ಜಿಲ್ಲಾಧಿಕಾರಿ ಆದೇಶದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ತೆಗೆದುಕೊಂಡರು.
