ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ (Corona Virus) ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಶುಕ್ರವಾರ ಒಂದೇ ದಿನ 78 ಕೊರೊನಾ (Covid-19) ಸೋಂಕು ಪ್ರಕರಣಗಳು ವರದಿಯಾಗಿವೆ. ಕೊರೊನಾ ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ. ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 175 ಕ್ಕೆ ಏರಿಕೆಯಾಗಿದೆ. ಕೋವಿಡ್-19 ರಿಂದ ಗುಣಮುಖರಾಗಿ ಇಂದು 7 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 3.29 % ಗೆ ಏರಿಕೆಯಾಗಿದೆ.
ಈ ಮೂರು ರಾಶಿಗಳ ಬಹುದಿನದ ಪ್ರೀತಿ ಪ್ರೇಮ ಮದುವೆ ಕಾರ್ಯ ಯಶಸ್ವಿ – ಶನಿವಾರ- ರಾಶಿ ಭವಿಷ್ಯ ಡಿಸೆಂಬರ್-23,2023
ಬೆಂಗಳೂರಿನಲ್ಲಿ ಇಂದು 68 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದೆ. ರಾಜಧಾನಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 156 ಕ್ಕೆ ತಲುಪಿದೆ. ಶುಕ್ರವಾರ ಬೆಂಗಳೂರು ಗ್ರಾಮಾಂತರದಲ್ಲಿ 1, ಚಿಕ್ಕಮಗಳೂರಿನಲ್ಲಿ 4, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2, ಮೈಸೂರಿನಲ್ಲಿ 1, ರಾಮನಗರದಲ್ಲಿ 2 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.