ಬೆಂಗಳೂರು:- ಕರ್ನಾಟಕದಲ್ಲಿ ಇಂದು 173 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, 2 ಸಾವಾಗಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಇಂದು 173 ಹೊಸ ಕೋವಿಡ್ -19 ಸೋಂಕು ಪ್ರಕರಣಗಳ ದಾಖಲಾತಿಯೊಂದಿಗೆ ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 702ಕ್ಕೆ ಏರಿದೆ. ಈ ಪೈಕಿ 649 ಜನರು ಮನೆಯಲ್ಲಿ ಪ್ರತ್ಯೇಕವಾಗಿರುತ್ತಾರೆ ಮತ್ತು ಉಳಿದ 53 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಂತೆಯೇ ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ರಾಜ್ಯದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 10ಕ್ಕೇರಿದೆ. ಮೃತರು ಕ್ರಮವಾಗಿ 59 ಮತ್ತು 69 ವರ್ಷ ವಯಸ್ಸಿನವರಾಗಿದ್ದಾರೆ, ಇಬ್ಬರೂ ಬೆಂಗಳೂರು ನಗರ ಜಿಲ್ಲೆಯಲ್ಲಿ ದಾಖಲಾಗಿದ್ದಾರೆ.
ಇಬ್ಬರಿಗೂ ಜ್ವರ ಮತ್ತು ಕೆಮ್ಮಿನ ಲಕ್ಷಣಗಳಿತ್ತು ಎಂದು ಹೇಳಲಾಗಿದೆ. ಕಳೆದ 24 ಗಂಟೆಗಳಲ್ಲಿ 37 ಸೋಂಕಿತರು ಚೇತರಿಸಿಕೊಂಡಿದ್ದು, ಒಟ್ಟು 8,349 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ 6,400 RTPCR ಮತ್ತು 1,949 ರಾಪಿಡ್ ಆಂಟಿಜೆನ್ ಪರೀಕ್ಷೆಗಳನ್ನು ನಡೆಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಸಂಖ್ಯೆಯ ಪರೀಕ್ಷೆಗಳನ್ನು ನಡೆಸಲಾಗಿದೆ.