ಬೆಂಗಳೂರು:– ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಶನಿವಾರ 201 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಒಬ್ಬ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದು, 60 ಜನರು ಗುಣಮುಖರಾಗಿದ್ದಾರೆ.
24 ಗಂಟೆಗಳಲ್ಲಿ 7,060 ಜನರಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ. 15 ಜನ ಸೋಂಕಿತರು ಐಸಿಯುನಲ್ಲಿದ್ದಾರೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 833ಕ್ಕೆ ಏರಿಕೆಯಾಗಿದೆ.
ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಒಬ್ಬ ಕೋವಿಡ್ ಸೋಂಕಿತ ಸಾವನ್ನಪ್ಪಿದ್ದಾನೆ. ಸೋಂಕಿನ ಪಾಸಿಟಿವಿಟಿ ದರ ಶೇ.2.84 ದಾಖಲಾಗಿದೆ.