ಬೆಂಗಳೂರು:- ಕಾಂಗ್ರೆಸ್ ಸರ್ಕಾರದಲ್ಲೂ ಭ್ರಷ್ಟಾಚಾರ ತಾಂಡವ ವಾಡುತ್ತಿದೆ ಎಂದು ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ಆಯೋಗಕ್ಕೆ ಕೆಂಪಣ್ಣ ದೂರು ನೀಡಿದ್ದಾರೆ.
ಕೆಲವು ಇಲಾಖೆಗಳಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ಬಂದಿಲ್ಲ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೂ ತರಲಾಗಿತ್ತು. ಹೆಚ್ಚು ಭ್ರಷ್ಟಾಚಾರ ಇರುವ ಕೆಲವು ಇಲಾಖೆಗಳ ಕುರಿತು ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ಮಾಹಿತಿ ನೀಡಿದ್ದೇವೆ. ಹಿಂದೆ ನಡೆದಿರುವ ಭ್ರಷ್ಟಾಚಾರದ ತನಿಖೆಯ ಜತೆಯಲ್ಲೇ ಈಗ ನಡೆಯುತ್ತಿರುವ ಅಕ್ರಮಗಳನ್ನೂ ನಿಯಂತ್ರಿಸುವಂತೆ ಆಯೋಗಕ್ಕೆ ಮನವಿ ಮಾಡಿದ್ದೇವೆ’ ಎಂದರು.,
ಗುತ್ತಿಗೆದಾರರ ಸಂಘದ ನಿಯೋಗವು ಮಂಗಳವಾರ ಆಯೋಗಕ್ಕೆ ದೂರು ಸಲ್ಲಿಸಿದೆ. ಅದನ್ನು ಇನ್ನೂ ಪರಿಶೀಲಿಸಿಲ್ಲ. ಹೀಗಾಗಿ ದೂರಿನಲ್ಲಿ ಏನು ಉಲ್ಲೇಖಿಸಿದ್ದಾರೆ ಎಂಬುದು ಇನ್ನೂ ತಿಳಿದಿಲ್ಲ’ ಎಂದು ಎಚ್.ಎನ್. ನಾಗಮೋಹನ್ ದಾಸ್ ಹೇಳಿದ್ದಾರೆ.