ಬೆಂಗಳೂರು: ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿ.ಎಂ. ಇಬ್ರಾಹಿಂಗೆ ಕೊರೊನಾ ಸೋಂಕು ದೃಢವಾಗಿದೆ. ತೀವ್ರ ಜ್ವರದಿಂದ ಬಳಲುತ್ತಿರುವ ಸಿಎಂ ಇಬ್ರಾಹಿಂಗೆ ಕೊರೋನಾ ಪಾಸಿಟಿವ್ ಬಂದಿದೆ. ಡಿ.ಕೆ ಶಿವಕುಮಾರ್ ನಿವಾಸದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡಿದ್ದ ಇಬ್ರಾಹಿಂಗೆ ನಿನ್ನೆ ಜ್ವರ ಕಾಣಿಸಿಕೊಂಡಿತ್ತು. ಇದೀಗ, ಕೊವಿಡ್ ಪರೀಕ್ಷೆಯಲ್ಲಿ ಸಿಎಂ ಇಬ್ರಾಹಿಂಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.
