ಬೆಂಗಳೂರು:- ಶೀಘ್ರವೇ ಜ್ಯುವೆಲರಿ ಪಾರ್ಕ್ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪರಿಷತ್ ಶಾಸಕ ಟಿಎ ಶರವಣ ಅವರು ಮನವಿ ಪತ್ರ ಸಲ್ಲಿಸಿದ್ದಾರೆ.
ಬೆಂಗಳೂರಿನ ಸಿಎಂ ಗೃಹ ಕಚೇರಿಯಲ್ಲಿ ಇಂದು ಕರ್ನಾಟಕ ಜ್ಯುವೆಲರಿ ಅಸೋಸಿಯೇಶನ್ ಅಧ್ಯಕ್ಷರು, ಕರ್ನಾಟಕ ವಿಧಾನ ಪರಿಷತ್ ಶಾಸಕರು ಹಾಗೂ ಸರ್ಕಾರಿ ಭರವಸೆಗಳ ಸಮಿತಿ ಅಧ್ಯಕ್ಷರಾದ ಟಿ.ಎ. ಶರವಣ ಅವರು ಸಿದ್ದರಾಮಯ್ಯರನ್ನು ಭೇಟಿ ಮಾಡಿದರು.
ಭೇಟಿ ವೇಳೆ ಹಿಂದಿನ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದ್ದ ಜ್ಯುವೆಲರಿ ಪಾರ್ಕ್ ಅನ್ನು ಆದಷ್ಟು ಬೇಗ ಅನುಷ್ಠಾನಕ್ಕೆ ತರಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಶೀಘ್ರದಲ್ಲೇ ಜ್ಯುವೆಲರಿ ಪಾರ್ಕ್ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.