ಚಾಮರಾಜನಗರ: ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಹಬ್ಬದ ಪ್ರಯುಕ್ತ ಬೆತ್ತದಲ್ಲಿ ವಿಜೃಂಭಣೆಯಿಂದ ರಥೋತ್ಸವ ನಡೆಯಲಿದ್ದು, ರಥೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ.
ಇಂದು ಬೆಳಗ್ಗೆ 8:50ಕ್ಕೆ ಮಾದಪ್ಪನ ರಥೋತ್ಸವ ನಡೆಯಲಿದ್ದು, ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಸಾಗರ ನೆರೆದಿದೆ. ಕಾಲ್ನಡಿಗೆಯಲ್ಲಿ ಆಗಮಿಸಿರುವ ಸಹಸ್ರಾರು ಭಕ್ತರು, ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದಾರೆ. ನೆರೆಯ ರಾಜ್ಯದಿಂದಲೂ ಸಹಸ್ರಾರು ಭಕ್ತರು ಆಗಮಿಸಿದ್ದು, ರಥೋತ್ಸವದಲ್ಲಿ ಪಾಲ್ಗೊಳ್ಳಲು ಬೆಟ್ಟದಲ್ಲಿ ಲಕ್ಷಾಂತರ ಭಕ್ತರು ವಾಸ್ತವ್ಯ ಹೂಡಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ವಿದ್ಯುತ್ ದೀಪಾಲಂಕಾರ ನಡೆದಿದ್ದು, ಮಾದಪ್ಪನ ಬೆಟ್ಟದಲ್ಲಿ ಭಕ್ತರಿಗೆ ಉಚಿತ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.