ಭಾರತ- ಆಸೀಸ್ ನಡುವೆ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ ಶುರುವಾಗಿದೆ. ಸೇಂಟ್ ಲೂಸಿಯಾದಲ್ಲಿ ಸ್ಥಳೀಯ ಕಾಲಮಾನ ಬೆಳಗ್ಗೆ 10:30ಕ್ಕೆ ಪಂದ್ಯ ನಡೆಯಲಿದೆ. ಹವಾಮಾನ ವರದಿಗಳ ಪ್ರಕಾರ, ಬೆಳಿಗ್ಗೆ 7 ರಿಂದ 9 ರವರೆಗೆ ಮಳೆಯಾಗುವ ನಿರೀಕ್ಷೆಯಿದೆ. ಇಂತಹ ಪರಿಸ್ಥಿತಿಯಲ್ಲಿ ನಿಗದಿತ ಸಮಯಕ್ಕೆ ಪಂದ್ಯ ಆರಂಭವಾಗುವ ಸಾಧ್ಯತೆ ಕಡಿಮೆ.
Darshan Arrest: ಅಪ್ಪನನ್ನು ಕಂಡು ಬಿಕ್ಕಿ-ಬಿಕ್ಕಿ ಅತ್ತ ವಿನೀಶ್.. ಮಗನನ್ನು ತಬ್ಬಿ ಮುದ್ದಾಡಿದ ದರ್ಶನ್..!
ಭಾರತ-ಆಸ್ಟ್ರೇಲಿಯಾ ಪಂದ್ಯದಲ್ಲಿ ಮಳೆಯ ಭೀತಿ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮಳೆಯಿಂದಾಗಿ ಪಂದ್ಯ ರದ್ದಾದರೆ ಭಾರತ ತಂಡ ನೇರವಾಗಿ ಸೆಮಿಫೈನಲ್ ಪ್ರವೇಶಿಸಲಿದೆ. ಬಾಂಗ್ಲಾದೇಶ ತಂಡ ಅಫ್ಘಾನಿಸ್ತಾನವನ್ನು ಸೋಲಿಸಿದರೆ ಮಾತ್ರ ಆಸ್ಟ್ರೇಲಿಯಾ ಸೆಮಿಫೈನಲ್ಗೆ ಹೋಗಲು ಸಾಧ್ಯವಾಗುತ್ತದೆ.
2024 ರ ಟಿ20 ವಿಶ್ವಕಪ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಮ್ಮ ಸೂಪರ್-8 ಸುತ್ತಿನ ಕೊನೆಯ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಅಫ್ಘಾನಿಸ್ತಾನ ವಿರುದ್ಧದ ಸೋಲಿನ ನಂತರ, ಈ ಪಂದ್ಯವು ಆಸ್ಟ್ರೇಲಿಯಾಕ್ಕೆ ಹೆಚ್ಚು ಮಹತ್ವದ್ದಾಗಿದೆ. ಈ ಪಂದ್ಯದಲ್ಲಿ ಗೆಲ್ಲುವುದು ಆಸೀಸ್ ಪಡೆಗೆ ಈಗ ಅನಿವಾರ್ಯವಾಗಿದೆ. ಒಂದು ವೇಳೆ ಈ ಪಂದ್ಯದಲ್ಲಿ ಆಸೀಸ್ ಸೋತರೆ ತಂಡದ ಸಮಸ್ಯೆಗಳು ಹೆಚ್ಚಾಗುತ್ತವೆ. ಅಂದಹಾಗೆ, ಭಾರತವನ್ನು ಸೋಲಿಸಿ ಸೆಮಿಫೈನಲ್ ತಲುಪಲು ನಾನು ಬಯಸುತ್ತೇನೆ ಎಂದು ಅಫ್ಘಾನಿಸ್ತಾನ ವಿರುದ್ಧದ ಸೋಲಿನ ನಂತರ ಆಸ್ಟ್ರೇಲಿಯಾದ ನಾಯಕ ಮಿಚೆಲ್ ಮಾರ್ಷ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)