ಭಾರತ ಹಾಗೂ ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ದುಬೈನ ಮೈದಾನ ಸಿದ್ಧವಾಗಿದೆ. ಚಾಂಪಿಯನ್ಸ್ ಟ್ರೋಫಿಯ “ಎ” ಗುಂಪಿನ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಭಾರತ ಈ ಪಂದ್ಯದಲ್ಲಿ ಗೆಲುವು ಸಾಧಿಸಿ ನಾಕೌಟ್ ಹಂತಕ್ಕೆ ಪ್ರವೇಶಿಸುವ ಕನಸು ಕಾಣುತ್ತಿದೆ. ಇನ್ನು ಪಾಕಿಸ್ತಾನಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.
ಮಹಿಳೆಯರೇ ಈ ಸೀಟು ಇನ್ಮುಂದೆ ಗಂಡಸರಿಗೆ ಮಾತ್ರ ಮೀಸಲು: ಪುರುಷ ಪ್ರಯಾಣಿಕರಿಗೆ KSRTCಯಿಂದ ಗುಡ್ನ್ಯೂಸ್!
ಭಾರತ ಮತ್ತು ಪಾಕಿಸ್ತಾನ್ ತಂಡಗಳು ಏಕದಿನ ಕ್ರಿಕೆಟ್ನಲ್ಲಿ ಇದುವರೆಗೆ 135 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡ ಗೆದ್ದಿರುವುದಕ್ಕಿಂತ ಹೆಚ್ಚಿನ ಪಂದ್ಯಗಳನ್ನು ಪಾಕಿಸ್ತಾನ್ ತಂಡವೇ ಗೆದ್ದಿದೆ. ಅದರಲ್ಲೂ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲೂ ಭಾರತದ ವಿರುದ್ಧ ಪಾಕ್ ಪಡೆ ಹೆಚ್ಚಿನ ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ.
ಅಂದರೆ 135 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಕೇವಲ 57 ಮ್ಯಾಚ್ಗಳಲ್ಲಿ ಮಾತ್ರ ಗೆದ್ದರೆ, ಅತ್ತ ಪಾಕಿಸ್ತಾನ್ 73 ಪಂದ್ಯಗಳಲ್ಲಿ ಭಾರತ ತಂಡಕ್ಕೆ ಸೋಲುಣಿಸಿದೆ. ಇನ್ನು ಐದು ಪಂದ್ಯಗಳು ಫಲಿತಾಂಶರಹಿತವಾಗಿತ್ತು.
ಇನ್ನು ಭಾರತ ಮತ್ತು ಪಾಕಿಸ್ತಾನ್ ನಡುವಣ ಕೊನೆಯ ಐದು ಏಕದಿನ ಪಂದ್ಯಗಳ ಫಲಿತಾಂಶವನ್ನು ಮಾತ್ರ ಗಣನೆಗೆ ತೆಗೆದುಕೊಂಡರೆ ಟೀಮ್ ಇಂಡಿಯಾವೇ ಬಲಿಷ್ಠ. ಏಕೆಂದರೆ 2018 ರಿಂದ ಭಾರತದ ವಿರುದ್ಧ ಪಾಕಿಸ್ತಾನ್ ತಂಡವು ಒಂದೇ ಒಂದು ಏಕದಿನ ಪಂದ್ಯ ಗೆದ್ದಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲೂ ಭಾರತ ತಂಡವೇ ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿದೆ
ತಂಡದಲ್ಲಿ ಯಾವುದೇ ಬದಲಾವಣೆ ಆಗಿಲ್ಲವಾದರೂ ಕೂಡ ಕೆಲವು ದಿಗ್ಗಜ ಬ್ಯಾಟ್ಸಮನ್ಗಳ ಫಾರ್ಮ್ ಕೊರತೆ ಚಿಂತೆಗೀಡು ಮಾಡಿದೆ. ಇಡೀ ಭಾರತೀಯ ಕ್ರಿಕೆಟ್ ಪ್ರಿಯರು ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮೇಲೆ ದೊಡ್ಡ ನಿರೀಕ್ಷೆಯನ್ನಿಟ್ಟುಕೊಂಡು ಕುಳಿತಿದ್ದಾರೆ. ಅವರು ಮತ್ತೆ ಫಾರ್ಮ್ನ್ನು ಸುಧಾರಿಸಿಕೊಂಡು ಹಳೆಯ ಅಬ್ಬರದ ಆಟವನ್ನು ಆಡಬೇಕಾದ ಅನಿವಾರ್ಯತೆ ಎದುರಾಗಿದೆ. ಇಂದಿನ ಪಂದ್ಯ ಅತ್ಯಂತ ಹೈವೋಲ್ಟೇಜ್ ಪಂದ್ಯವಾಗಿದ್ದು, ಕೋಟಿ-ಕೋಟಿ ಕ್ರಿಕೆಟ್ ಅಭಿಮಾನಿಗಳು ಕಾದು ಕುಳಿತಿದ್ದಾರೆ.