ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 15 ನೇಯ ದಾಖಲೆಯ ಬಜೆಟ್ ಮಂಡಿಸಲಿದ್ದಾರೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಬಜೆಟ್ನಲ್ಲಿ ಮಹತ್ವದ ಘೋಷಣೆಗಳು ಹೊರಬೀಳುವ ನಿರೀಕ್ಷೆಗಳೂ ಇವೆ. ಈ ಬಾರಿ ಬಜೆಟ್ ಗಾತ್ರ ಸುಮಾರು 50 ಸಾವಿರ ಕೋಟಿ ರೂಪಾಯಿ ಹೆಚ್ಚಳವಾಗಲಿದೆ.
ಗ್ಯಾರಂಟಿ ಯೋಜನೆಗಳ ಜೊತೆಗೆ ಹೊಸ ಯೋಜನೆಗಳನ್ನು ನೀಡುವ ದೊಡ್ಡ ಸವಾಲು ಸಿದ್ದರಾಮಯ್ಯ ಮುಂದೆ ಇದ್ದು, ಬಜೆಟ್ ಗಾತ್ರ ಮತ್ತು ಸಾಲದ ಹೊರೆ ಹೆಚ್ಚಾಗಲಿದೆ. ಬಜೆಟ್ನಲ್ಲಿ ಮದ್ಯದ ಮೇಲಿನ ಸುಂಕವನ್ನು ಹೆಚ್ಚಳ ಮಾಡುವ ಸಾಧ್ಯತೆ ಇದೆ. ಆ ಮೂಲಕ ಆದಾಯ ಕ್ರೋಢೀಕರಣಕ್ಕೆ ಸಿದ್ದರಾಮಯ್ಯ ಕ್ರಮಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಳೆದ ಬಾರಿ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ಇತ್ತು. ಈ ಬಾರಿ 3.50 ಲಕ್ಷ ಕೋಟಿ ಅಥವಾ 3.80 ಲಕ್ಷ ಕೋಟಿ ತಲುಪುವ ಸಾಧ್ಯತೆ ಇದೆ. ಕಳೆದ ಬಜೆಟ್ನಲ್ಲಿ 85,815 ಕೋಟಿ ರೂ. ಸಾಲದ ಮೊರೆ ಹೋಗಿತ್ತು. ಈ ಬಾರಿ ಅಂದಾಜು 1 ಲಕ್ಷ ಕೋಟಿಗೆ ಸಾಲ ಹೆಚ್ಚಾಗುವ ಸಾಧ್ಯತೆ ಇದೆ
ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 15ನೇ ಬಜೆಟ್ ಇದಾಗಿದೆ. ಹೀಗಾಗಿ ಅವರ ಪಾಲಿಗೆ ಇದೊಂದು ಮಹತ್ವದ ಕ್ಷಣ. ಮತ್ತೊಂದೆಡೆ ಲೋಕಸಭೆ ಚುನಾವಣೆಯೂ ಸಮೀಪಿಸುತ್ತಿದ್ದು, ಬಜೆಟ್ ಮೇಲಿನ ನಿರೀಕ್ಷೆಗಳು ಹೆಚ್ಚಾಗಿವೆ. ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿಗಳ ಕಾರಣ ಈ ಬಾರಿ ಬಜೆಟ್ ಗಾತ್ರ ಹೆಚ್ಚಾಗುವ ಸಾಧ್ಯತೆ ಇದೆ. ಅದೇ ರೀತಿ ಸಾಲದ ಪ್ರಮಾಣವೂ ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ. ಲೋಕಸಭೆ ಚುನಾವಣೆಯ ಕಾರಣ ಆರ್ಥಿಕ ಹೊರೆ ಆಗದಂತೆ ಜನಪ್ರಿಯ ಬಜೆಟ್ ಮಂಡನೆ ಮಾಡಬೇಕಾದ ಅನಿವಾರ್ಯತೆಯೂ ಸಿದ್ದರಾಮಯ್ಯ ಮುಂದಿದೆ. 5 ಗ್ಯಾರಂಟಿಗಳಿಗೆ 58 ಸಾವಿರ ಕೋಟಿ ಮೀಸಲು ಅನಿವಾರ್ಯವಾಗಿದೆ. ಗ್ಯಾರಂಟಿ ಯೋಜನೆಗಳಿಗಾಗಿ ತೆರಿಗೆ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಆದಾಗ್ಯೂ, ತೆರಿಗೆ ಹೆಚ್ಚಳ ಮಾಡದೆ ಬಜೆಟ್ ಮಂಡಿಸುವ ಸವಾಲು ಕೂಡ ಅವರ ಮುಂದಿದೆ.
ಕಳೆದ ಬಾರಿ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ಇತ್ತು. ಈ ಬಾರಿ 3.50 ಲಕ್ಷ ಕೋಟಿ ಅಥವಾ 3.80 ಲಕ್ಷ ಕೋಟಿ ತಲುಪುವ ಸಾಧ್ಯತೆ ಇದೆ.