ಬೆಂಗಳೂರು ಜನರು 2025 ಹೊಸ ವರ್ಷವನ್ನು ಸ್ವಾಗತಿಸಲು ಕಾತುರರಾಗಿದ್ದಾರೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಅಲರ್ಟ್ ಆಗಿದ್ದಾರೆ. ಈ ಬಗ್ಗೆ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಹೊಸ ವರ್ಷಾಚರಣೆ ವಿರೋಧಿಸುವ ಸಂಘ ಸಂಸ್ಥೆಗಳ ಬಗ್ಗೆ ಗುಪ್ತವಾಗಿ ಮಾಹಿತಿ ಸಂಗ್ರಹಿಸಿ, ಮುನ್ನೆಚ್ಚರಿಕೆ ವಹಿಸಿ. ಮಾಲ್ಗಳಲ್ಲಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿ ಇಡುವಂತೆ ಅಲ್ಲಿನ ಸಿಬ್ಬಂದಿಗಳಿಗೆ ಸೂಚನೆ ನೀಡಿ.
ಎಲ್ಲ ಅಧಿಕಾರಿಗಳು ಸರ್ವೀಸ್ ರಿವಾಲ್ವಾರ್ ಹೊಂದಿರಬೇಕು. ಪೊಲೀಸ್ ಸಿಬ್ಬಂದಿ ಹೆಲ್ಮೆಟ್, ಲಾಠಿಗಳನ್ನು ಹೊಂದಿರಬೇಕು. ಹೆಣ್ಣು ಮಕ್ಕಳನ್ನು ಚುಡಾಯಿಸುವವರ ಮೇಲೆ ಕೂಡಲೇ ಕ್ರಮ ಕೈಗೊಳ್ಳಿ. ರಸ್ತೆ ಮೇಲೆ ಬಾಟಲಿ ಹೊಡೆದು ದಾಂದಲೆ ಮಾಡುವವರನ್ನು ಕೂಡಲೇ ವಶಕ್ಕೆ ಪಡೆದು ಕ್ರಮಕೈಗೊಳ್ಳಿ ಎಂದು ಹೇಳಿದ್ದಾರೆ.
Raw Banana: ಬಾಳೆಕಾಯಿ ಸೇವನೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಅನ್ನೋದು ನಿಮಗೆ ಗೊತ್ತಾ..?
ಮದ್ಯ ಮಾರಾಟ ಜಾಗದಲ್ಲಿ ಗಲಾಟೆ, ದೊಂಬಿ, ಬಾಟಲಿ ಎಸೆಯುವುದು, ಮಹಿಳೆಯರ ಚುಡಾಯಿಸುವುದು ನಡೆದರೆ ಅದಕ್ಕೆ ಮಾಲೀಕರೇ ಹೊಣೆಗಾರರಾಗುತ್ತಾರೆ. ಜನ ಸೇರುವ ರಸ್ತೆ ಮತ್ತು ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸಿ. ರಸ್ತೆಗಳಲ್ಲಿ ವಿದ್ಯುತ್ ದೀಪಗಳು ಕೆಲಸ ಮಾಡುವಂತೆ ನೋಡಿಕೊಳ್ಳಬೇಕು. ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಎಂ.ಜಿ.ರಸ್ತೆ ಸೇರಿದಂತೆ ಇತರೆಡೆ ಜನರ ಆಗಮನ ಮತ್ತು ನಿರ್ಗಮನಕ್ಕೆ ಸೂಕ್ತ ಕ್ರಮಕೈಗೊಳ್ಳಿ ಎಂದಿದ್ದಾರೆ.