ಪ್ಯಾರಿಸ್ ಒಲಿಂಪಿಕ್ಸ್ಗೆ ಕ್ಷಣಗಣನೆ ಆರಂಭವಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಈ ಕ್ರೀಡಾಕೂಟ ಆರಂಭವಾಗಲಿದೆ. ಫ್ರಾನ್ಸ್ ಈ ಕ್ರೀಡಾಕೂಟವನ್ನು ಆಯೋಜಿಸುತ್ತಿರುವುದು ಇದು ಮೂರನೇ ಬಾರಿ. ಹೀಗಾಗಿ ಈ ಕ್ರೀಡಾಕೂಟವನ್ನು ಇನ್ನಷ್ಟು ವಿಶೇಷಗೊಳಿಸುವ ಸಲುವಾಗಿ ಆಯೋಜಕರು ಹೊಸ ಪ್ರಯೋಗಕ್ಕೆ ಕೈಹಾಕಿದ್ದಾರೆ
ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭವು ದೋಣಿ ಮೆರವಣಿಗೆಯೊಂದಿಗೆ ಪ್ರಾರಂಭವಾಗುತ್ತದೆ. ಸುಮಾರು ಮೂರು ಗಂಟೆಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಮೂರು ಸಾವಿರ ಕಲಾವಿದರು ಪ್ರದರ್ಶನವನ್ನು ಪ್ರಸ್ತುತಪಡಿಸಲಿದ್ದಾರೆ. ಆದಾಗ್ಯೂ, ಆಟಗಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಈ ಸ್ಥಳವನ್ನು ಸಹ ಬದಲಾಯಿಸಬಹುದು ಮತ್ತು ಉದ್ಘಾಟನಾ ಸಮಾರಂಭವನ್ನು ಐಫೆಲ್ ಟವರ್ ಮುಂಭಾಗದಲ್ಲಿ ನಡೆಸಬಹುದು ಎಂದು ಹೇಳಲಾಗುತ್ತಿದೆ.
ಭದ್ರತಾ ಕಾರಣಕ್ಕಾಗಿ ಭಾರತವನ್ನು ಕಳುಹಿಸಲು ನಿರಾಕರಿಸಿದ್ರೆ BCCI ಲಿಖಿತ ರೂಪದಲ್ಲಿ ಕೊಡಿ: ಪಾಕ್ ಪಟ್ಟು
ಈ ಐತಿಹಾಸಿಕ ಕ್ಷಣದಲ್ಲಿ ಹೆಚ್ಚು ಹೆಚ್ಚು ಪ್ರೇಕ್ಷಕರು ಪಾಲ್ಗೊಳ್ಳುವಂತಾಗಲು ನದಿಯ ದಡದಲ್ಲಿ ಉದ್ಘಾಟನೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಒಂದು ವೇಳೆ ಭದ್ರತೆ ಅಥವಾ ಇನ್ನಾವುದೇ ಕಾರಣದಿಂದ ಸಾಧ್ಯವಾಗದಿದ್ದರೆ, ಸ್ಟೇಡ್ ಡಿ ಫ್ರಾನ್ಸ್ನಲ್ಲಿ ಉದ್ಘಾಟನಾ ಸಮಾರಂಭವನ್ನು ಆಯೋಜಿಸುವ ಆಯ್ಕೆಯನ್ನು ಸಂಘಟಕರು ಇಟ್ಟುಕೊಂಡಿದ್ದಾರೆ ಎಂದು ವರದಿಯಾಗಿದೆ.
ಪ್ಯಾರಿಸ್ ಕ್ರೀಡಾಕೂಟಕ್ಕೆ ಈಗಾಗಲೇ 90 ಲಕ್ಷ ಟಿಕೆಟ್ಗಳು ಮಾರಾಟವಾಗಿವೆ. ಕೋವಿಡ್ -19 ಕಾರಣದಿಂದಾಗಿ ಟೋಕಿಯೋ 2020 ಕ್ಕೆ ಟಿಕೆಟ್ಗಳು ಲಭ್ಯವಿರಲಿಲ್ಲ. ಆದ್ದರಿಂದ ರಿಯೊ ಒಲಿಂಪಿಕ್ಸ್ ನಂತರ ಮೊದಲ ಬಾರಿಗೆ, ಈ ಕ್ರೀಡಾಕೂಟಕ್ಕೆ ಟಿಕೆಟ್ಗಳು ಲಭ್ಯವಾಗಿವೆ.