ಮೈಸೂರು: ದಕ್ಷಿಣ ಭಾರತದ ಏಕೈಕ ಕುಂಭಮೇಳಕ್ಕೆ ಕ್ಷಣಗಣನೆ ಅರಂಭವಾಗಿದ್ದು, ಟಿ.ನರಸೀಪುರದ ತ್ರಿವೇಣಿಸಂಗಮದಲ್ಲಿ ಇಂದಿನಿಂದ ಕುಂಭಮೇಳ ನಡೆಯಲಿದೆ. ಮೂರು ದಿನಗಳ ಕಾಲ 13ನೇ ಕುಂಭಮೇಳ ನಡೆಯಲಿದ್ದು, ತ್ರಿವೇಣಿ ಸಂಗಮದಲ್ಲಿ ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಸಾವಿರಾರು ಭಕ್ತರು ಸೇರುವ ನಿರೀಕ್ಷೆ ಇದೆ. ಮುಂಬರುವ ಫೆ.12ರಂದು ಟಿ.ನರಸೀಪುರದಲ್ಲಿ ಪವಿತ್ರ ಕುಂಭಸ್ನಾನ ನಡೆಯಲಿದೆ. ಫೆ 9ರಿಂದ 9:30ರೊಳಗೆ ಶುಭ ಮೀನ ಲಗ್ನ ಮತ್ತು ಮಧ್ಯಾಹ್ನ 12ರಿಂದ 1 ಗಂಟೆಯವರೆಗೆ ವೃಷಭ ಲಗ್ನದಲ್ಲಿ ಕುಂಭಮೇಳದ ಪುಣ್ಯಸ್ನಾನ ಮಾಡಲು ಮುಹೂರ್ತ ನಿಗದಿ ಮಾಡಲಾಗಿದೆ. ಇನ್ನೂ ಕುಂಭಮೇಳಕ್ಕೆ ಸರ್ಕಾರ ಮತ್ತು ಜಿಲ್ಲಾಡಳಿತ ಸಕಲ ಸಿದ್ದತೆ ನಡೆಸಿದೆ.
ದಕ್ಷಿಣ ಕುಂಭಮೇಳಕ್ಕೆ ಸಕಲ ಸಿದ್ದತೆ ; ತ್ರಿವೇಣಿ ಸಂಗಮಕ್ಕೆ ನಿರ್ಮಲಾನಂದನಾಥ ಶ್ರೀಗಳ ಭೇಟಿ
ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಕುಂಭಮೇಳದ ಉದ್ಘಾಟನೆ ಮಾಡಲಿದ್ದು, ಸಚಿವರಾದ ಕೆ.ವೆಂಕಟೇಶ್, ರಾಮಲಿಂಗಾರೆಡ್ಡಿ, ವಿಪಕ್ಷ ನಾಯಕ ಆರ್.ಅಶೋಕ್, ಸಂಸದ ಯದುವೀರ್ ಒಡೆಯರ್, ಸ್ಥಳೀಯ ಶಾಸಕರು ಭಾಗಿಯಾಗಲಿದ್ದಾರೆ. ಅಲ್ಲದೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಕುಮಾರಸ್ವಾಮಿ ವಿವಿಧ ಕಾರ್ಯಕ್ರಮಗಳಲ್ಲಿ ಉಪಸ್ಥಿತರಿರಲಿದ್ದಾರೆ.
ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಮೈಸೂರಿನ ಅವಧೂತ ದತ್ತಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಸೇರಿದಂತೆ ವಿವಿಧ ಮಠಾಧೀಶರು ಭಾಗಿಯಾಗಲಿದ್ದಾರೆ.