ಮಹಿಳಾ ಪ್ರೀಮಿಯರ್ ಲೀಗ್ನ ಮೂರನೇ ಆವೃತ್ತಿಯ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಅದರಂತೆ ಫೆಬ್ರವರಿ 14 ರಿಂದ ಈ ಟೂರ್ನಿ ಪ್ರಾರಂಭವಾಗಲಿದ್ದು, ಮಾರ್ಚ್ 11 ರಂದು ಕೊನೆಗೊಳ್ಳಲಿದೆ. ಮೊದಲ ಬಾರಿಗೆ ಈ ಲೀಗ್ ಅನ್ನು ನಾಲ್ಕು ನಗರಗಳಲ್ಲಿ ಆಯೋಜಿಸಲಾಗುತ್ತಿೆ.
ಡಬ್ಲ್ಯುಪಿಎಲ್ನ ಮೂರನೇ ಆವೃತ್ತಿ ಫೆಬ್ರವರಿ 14 ರಿಂದ ಪ್ರಾರಂಭವಾಗಲಿದ್ದು, ಮಾರ್ಚ್ 15 ರಂದು ನಡೆಯಲ್ಲಿರುವ ಫೈನಲ್ ಪಂದ್ಯದೊಂದಿಗೆ ಟೂರ್ನಿಗೆ ತೆರೆಬೀಳಲಿದೆ. ಈ ಟೂರ್ನಿಯ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.
ವಡೋದರದಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಕೊಟಂಬಿ ಕ್ರೀಡಾಂಗಣದಲ್ಲಿ ಟೂರ್ನಿಯ ಮೊದಲ ಪಂದ್ಯ ನಡೆಯಲಿದ್ದು, ಅಂದು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.
ಈ ಬಾರಿ ಬಿಸಿಸಿಐ ಡಬ್ಲ್ಯುಪಿಎಲ್ ವ್ಯಾಪ್ತಿಯನ್ನು ವಿಸ್ತರಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಹಿಂದೆ ಲೀಗ್ನ ಮೊದಲ ಸೀಸನ್ ಮುಂಬೈನ ಎರಡು ವಿಭಿನ್ನ ಮೈದಾನಗಳಲ್ಲಿ ಮಾತ್ರ ನಡೆದಿದ್ದರೆ, ಕೊನೆಯ ಸೀಸನ್ ಬೆಂಗಳೂರು ಮತ್ತು ದೆಹಲಿಯಲ್ಲಿ ನಡೆದಿತ್ತು. ಇದೀಗ 4 ಸ್ಥಳಗಳಲ್ಲಿ ಟೂರ್ನಿ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ.