ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ಟೀಮ್ ಇಂಡಿಯಾ ಮಾಸ್ಟರ್ ಪ್ಲಾನ್ ಮಾಡಿದೆ. ಪಾಕಿಸ್ತಾನ ಹಾಗೂ ಯುಎಇ ಆತಿಥ್ಯದಲ್ಲಿ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಈಗಾಗಲೇ ತನ್ನ ಸಿದ್ಧತೆಯನ್ನು ಆರಂಭಿಸಿದೆ. ಈ ಐಸಿಸಿ ಟೂರ್ನಿಯ ತಯಾರಿಯ ಭಾಗವಾಗಿ ಇನ್ನು ಕೆಲವೇ ದಿನಗಳಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಆ ಬಳಿಕ ಚಾಂಪಿಯನ್ಸ್ ಟ್ರೋಫಿಗೆ ಕಾಲಿಡಲಿದೆ
ಬಂಡೀಪುರದಲ್ಲಿ ರಾತ್ರಿ ವೇಳೆ ಆ್ಯಂಬುಲೆನ್ಸ್ಗೆ ಮಾತ್ರ ಅವಕಾಶ: ಸ್ಪಷ್ಟನೆ ಕೊಟ್ಟ ಸಚಿವ ಈಶ್ವರ ಖಂಡ್ರೆ!
ಭಾರತ ತಂಡ ದುಬೈ ತಲುಪಿದ ಬಳಿಕ ಅಭ್ಯಾಸ ಪಂದ್ಯವನ್ನು ಆಡಲಿದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಈ ಪಂದ್ಯ ಯಾವಾಗ ಮತ್ತು ಯಾವ ತಂಡದೊಂದಿಗೆ ನಡೆಯಲಿದೆ ಎಂಬುದು ಇನ್ನೂ ಬಹಿರಂಗವಾಗಿಲ್ಲ. ಭಾರತ ಸೇರಿದಂತೆ ಎಲ್ಲಾ ತಂಡಗಳಿಗೆ ಐಸಿಸಿ ಅಭ್ಯಾಸ ಪಂದ್ಯಗಳನ್ನು ಆಯೋಜಿಸುತ್ತಿದೆಯೇ ಅಥವಾ ಟೀಂ ಇಂಡಿಯಾದ ಸಿದ್ಧತೆಗಳನ್ನು ಸಂಪೂರ್ಣವಾಗಿ ಮಾಡಲು ಬಿಸಿಸಿಐ ತನ್ನದೇ ಆದ ಮಟ್ಟದಲ್ಲಿ ವ್ಯವಸ್ಥೆಗಳನ್ನು ಮಾಡುತ್ತಿದೆಯೇ ಎಂಬುದು ಸಹ ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಈ ಪಂದ್ಯದ ಮೂಲಕ ಟೀಂ ಇಂಡಿಯಾ ಕೌಶಲ್ಯದ ಮಟ್ಟದಲ್ಲಿ ಮಾತ್ರವಲ್ಲದೆ ಪರಿಸ್ಥಿತಿಯ ಮಟ್ಟಕ್ಕೂ ಹೊಂದಿಕೊಳ್ಳಲು ಪ್ರಯತ್ನಿಸುತ್ತದೆ
ಭಾರತ-ಇಂಗ್ಲೆಂಡ್ ನಡುವಿನ ಸರಣಿಯ ಅಂತ್ಯ ಮತ್ತು ಚಾಂಪಿಯನ್ಸ್ ಟ್ರೋಫಿ ಆರಂಭದ ನಡುವೆ ಅತ್ಯಂತ ಕಡಿಮೆ ಸಮಯ ಇರುವುದರಿಂದ ಟೀಂ ಇಂಡಿಯಾ ಕೇವಲ ಒಂದು ಅಭ್ಯಾಸ ಪಂದ್ಯವನ್ನಾಡಬಹುದು ಇಂತಹ ಪರಿಸ್ಥಿತಿಯಲ್ಲಿ ನಾಯಕ ರೋಹಿತ್ ಶರ್ಮಾ ಸೇರಿದಂತೆ ಎಲ್ಲಾ ಆಟಗಾರರು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ತಮ್ಮನ್ನು ಸಂಪೂರ್ಣವಾಗಿ ಪರೀಕ್ಷಿಸಿಕೊಳ್ಳಬೇಕಾಗಿದೆ.