ಚನ್ನಪಟ್ಟಣ:- DCM ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ರಿಲೀಫ್ ಕೊಟ್ಟಿಲ್ಲ, ಇವರೇ ತೆಗೆದುಕೊಂಡಿದ್ದಾರೆ ಎಂದು ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಹೈಕೋರ್ಟ್ ಅವರಿಗೆ ರಿಲೀಫ್ ಕೊಟ್ಟಿಲ್ಲ. ಅವರೇ ತೆಗೆದುಕೊಂಡಿದ್ದಾರೆ. ಇನ್ನೂ ಸ್ವಲ್ಪ ದಿನ ಇದನ್ನು ಮುಂದಕ್ಕೆ ಎಳೆಯಬೇಕಲ್ಲ ಎಂದರು.
ಬಹುಶಃ ಗ್ಯಾರಂಟಿ ಕಾರ್ಯಕ್ರಮದ ಮೂಲಕವೇ ದೇಶದಲ್ಲಿ ಅಧಿಕಾರಕ್ಕೆ ಬರುತ್ತೇವೆ. ಆಗ, ಎಲ್ಲಾ ಪ್ರಕರಣಗಳನ್ನು ಮುಚ್ಚಿ ಹಾಕಬಹುದು ಎಂದು ಐದಾರು ತಿಂಗಳು ಮುಂದೂಡುತ್ತಿದ್ದಾರೆ. ಇದೆಲ್ಲಾ ತಂತ್ರಗಾರಿಕೆ ಅಷ್ಟೇ. ಮುಂದೆ ಏನೇನಾಗುತ್ತದೊ ನೋಡೊಣ’ ಎಂದರು.
ನಾನು ವಕೀಲನಾಗಿರುವುದಕ್ಕೆ ಪ್ರಕರಣ ವಾಪಸ್ ತೆಗೆದುಕೊಂಡಿದ್ದು’ ಎಂಬ ಸಿ.ಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಅವರು ದೊಡ್ಡ ವಕೀಲರು ಅಂತ ನನಗೆ ಗೊತ್ತುಗೆ. ಇವರೊಬ್ಬರೇ ಕಾನೂನು ತಿಳಿದುಕೊಂಡಿದ್ದಾರೆ ತಾನೇ. ಅದಕ್ಕೆ ಅರ್ಕಾವತಿ ಡಿನೋಟಿಫಿಕೇಷನ್ ತೆಗೆದು ರಿಡೂ ಮಾಡಿದ್ರಿ. ಕೆಂಪಣ್ಣನ ಆಯೋಗ ಮಾಡಿ ಉಳಿದುಕೊಂಡ್ರಲ್ಲ. ಆ ರೀತಿಯ ವಕೀಲರು ಇವರು’ ಎಂದು ವಾಗ್ದಾಳಿ ನಡೆಸಿದರು.
ಜನಸಾಮಾನ್ಯರಿಗೆ ಒಂದು ನ್ಯಾಯ, ಇವರಿಗೊಂದು ನ್ಯಾಯ. ಅಂತಹ ವಕೀಲಿಕೆಯಲ್ಲಿ ಇವರು ಬುದ್ದಿವಂತರಿದ್ದಾರೆ. ಲೋಕಾಯುಕ್ತವನ್ನು ನಿಷ್ಕ್ರಿಯಗೊಳಿಸಿ ಎಸಿಬಿ ರಚನೆ ಮಾಡಿ, ಇವರ ಮೇಲೆ ಬಂದ ಪ್ರಕರಣ ಗಳನ್ನು ಮುಚ್ಚಿ ಹಾಕಿಕೊಂಡರು. ನಾನು ಮುಖ್ಯಮಂತ್ರಿಯಾಗಿದ್ದಾಗ ಕಾನೂನುಬಾಹಿರ ಚಟುವಟಿಕೆ ವಿರುದ್ದ ಹೋರಾಟ ಮಾಡಿದ್ದೆ. ನನ್ನ ಮೇಲೆ ಇವರ ಸರ್ಕಾರದ 15 ಪ್ರಕರಣ ಇತ್ತು. ಆಗ, ನಾನೂ ಇವರಂತೆ ನಡೆದುಕೊಂಡೆನಾ?’ ಎಂದು ಪ್ರಶ್ನಿಸಿದರು.