ಬೆಂಗಳೂರು: ಕೇರಳದಲ್ಲಿ ಕೊವಿಡ್ ರೂಪಾಂತರಿ ತಳಿ ಪತ್ತೆಯಾಗಿದ್ದು, ರಾಜ್ಯದಲ್ಲಿ ಕೊವಿಡ್ ಆತಂಕ ಮನೆ ಮಾಡಿದೆ. ಕೊವಿಡ್ ಬಗ್ಗೆ ನಿರ್ಲಕ್ಷ್ಯವಹಿಸದಂತೆ ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.
ಈ ಕುರಿತು ಕೆಲವೊಂದು ಸೂಚನೆಗಳನ್ನು ನೀಡಿರುವ ವೈದ್ಯರು, ಒಂದು ಕಡೆಯಿಂದ ಇನ್ನೊಂದು ಕಡೆ ಸಂಚಾರ ಮಾಡುವಾಗ ಕಡ್ಡಾಯವಾಗಿ ಮಾಸ್ಕ್ ಬಳಸುವುದು ಕಡ್ಡಾಯ. ವಯಸ್ಸಾದವರು, ಸಕ್ಕರೆ ಕಾಯಿಲೆ ಇರುವವರು ಆದಷ್ಟು ಎಚ್ಚರ ವಹಿಸಲು ವೈದ್ಯರು ಸಲಹೆ ನೀಡಿದ್ದಾರೆ. ಕೆಮ್ಮು, ನೆಗಡಿ, ಜ್ವರ ಇದ್ದರೆ ಈಗಿನಿಂದಲೇ ಮಾಸ್ಕ್ ಬಳಸಲು ಸೂಚನೆ ನೀಡಲಾಗಿದೆ.
ಇನ್ನು, ಯಾರಿಗೆ ಕೆಮ್ಮು ಇರುತ್ತದೆಯೋ ಅಂತಹವರ ಹತ್ತಿರ ಹೋಗುವುದು ಕಡಿಮೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಆದಷ್ಟು ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ವೈದ್ಯರು ಸೂಚನೆ ನೀಡಿದ್ದಾರೆ.