ಶಿವಮೊಗ್ಗ: ಮಂಕಿ ಕ್ಯಾಪ್ ಹಾಕಿಕೊಂಡು ಬಂದ ಖದೀಮರು ಹೈಟೆಕ್ ಕಾರಿನಲ್ಲಿ ಹಸವೊಂದನ್ನು ಕಳ್ಳತನ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ. ಫಾರ್ಚೂನರ್ ಕಾರಿನಲ್ಲಿ ಬಂದು ಹಸು ಕಳವು ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
Health Tips: ಸೀಮೆ ಬದನೆಕಾಯಿ ಸೇವನೆಯ ಆರೋಗ್ಯಕರ ಪ್ರಯೋಜನಗಳೇನು ಗೊತ್ತಾ..?
ಹಸು ಕದ್ದ ವಿಷಯ ತಿಳಿದ ಕೂಡಲೇ ಸ್ಥಳೀಯರು ಕಾರನ್ನು ಅಡ್ಡ ಹಾಕಲು ಯತ್ನಿಸಿದ್ದಾರೆ. ಆದರೆ, ಕಳ್ಳರು ಸ್ಥಳೀಯರ ಮೇಲೆ ಕಾರು ಹತ್ತಿಸುವ ಯತ್ನಿಸಿದ್ದಾರೆ. ಘಟನೆ ಕುರಿತು ಸ್ಥಳೀಯರು ಸೊರಬ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹಸು ಕಳ್ಳರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.