ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ರಾಜ್ಯಸಭಾ ಸಂಸದ ಸೀತಾರಾಂ ಯೆಚೂರಿ (72) ಇಂದು ನಿಧನರಾದರು. ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಏಮ್ಸ್ನ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ಅವರು ಕೃತಕ ಉಸಿರಾಟದ ಬೆಂಬಲದಲ್ಲಿದ್ದರು.
40ರ ನಂತರ ತಂದೆಯಾಗೋ ಬಗ್ಗೆ ಯೋಚನೆ ಮಾಡೋ ಗಂಡಸರೇ ಒಮ್ಮೆ ಈ ಸ್ಟೋರಿ ಓದಿ.!
ವೈದ್ಯರ ಬಹುಶಿಸ್ತೀಯ ತಂಡದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಕೊನೆಯುಸಿರೆಳೆದಿದ್ದಾರೆ. 2015ರಲ್ಲಿ ಪ್ರಕಾಶ್ ಕಾರಟ್ ಅವರ ನಂತರ ಯೆಚೂರಿ ಸಿಪಿಎಂ ಪ್ರಧಾನ ಕಾರ್ಯದರ್ಶಿಯಾದರು. ವಿಪಿ ಸಿಂಗ್ ನೇತೃತ್ವದ ಸರ್ಕಾರದ ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.