ಬೆಂಗಳೂರು;- ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಗಳ ಮೇಲೆ ಸಿಸಿಬಿ ದಾಳಿ ನಡೆಸಿದ್ದು, 13 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿಗಳಿಂದ 10 ಲಕ್ಷ ರೂ. ನಗದು ಇನ್ನಿತರ ಬೆಟ್ಟಿಂಗ್ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾತನಾಡಿ, ನಗರದಲ್ಲಿ ಪೊಲೀಸ್ ಗಸ್ತು ವ್ಯವಸ್ಥೆ ಪರಿಣಾಮಕಾರಿಯಾಗಿ ನಡೆಯುತ್ತಿವೆ. ಈ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳು ಮೂಲತಃ ಹೈದ್ರಾಬಾದ್ನವರು ಎಂದು ತಿಳಿದುಬಂದಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದರು.
ನಗರದಾದ್ಯಂತ ಚೀತಾ, ಹೊಯ್ಸಳ ನಿರಂತರ ಬೀಟ್ ಮಾಡುತ್ತಿವೆ. ನೈಟ್ ಬೀಟ್ ಸಹ ವ್ಯವಸ್ಥಿತವಾಗಿ ನಡೆಯುತ್ತಿದೆ. ಯಾವುದೇ ರೀತಿಯ ಅಪರಾಧ ಚಟುವಟಿಕೆಗಳು, ಆನ್ಲೈನ್, ಆಫ್ಲೈನ್ ದಂಧೆಗಳ ಸೇರಿದಂತೆ ಎಲ್ಲದರ ವಿರುದ್ಧ ಪೊಲೀಸ್ ಇಲಾಖೆ ಗಂಭೀರ ನಿಗಾ ವಹಿಸಿ ಕೆಲಸ ಮಾಡುತ್ತಿದೆ ಎಂದು ಅವರು ತಿಳಿಸಿದರು.