ಮುಂಬೈ: ಕ್ರಿಕೆಟ್ ಅಭಿಮಾನಿಗಳು ಕುತೂಹಲದಿಂದ ಕಾದಿದ್ದ, ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಮಾರ್ಚ್ 22 ರಿಂದ ಪ್ರಾರಂಭವಾಗಲಿದೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ (Arun Dhumal), ಮಾ.22 ರಂದು ಐಪಿಎಲ್ಗೆ ಚಾಲನೆ ನೀಡಲು ಎದುರು ನೋಡುತ್ತಿದ್ದೇವೆ. 15 ದಿನಗಳ ವೇಳಾಪಟ್ಟಿಯನ್ನು ಮೊದಲು ಬಿಡುಗಡೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ
ಫೆಬ್ರವರಿ 23 ರಂದು ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಗೆ ಚಾಲನೆ: ಪೂರ್ಣ ವೇಳಾಪಟ್ಟಿ ಹೀಗಿದೆ
ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಐಪಿಎಲ್ 17ನೇ ಆವೃತ್ತಿಯ ವೇಳಾಪಟ್ಟಿ ಬಿಡುಗಡೆಗೊಂಡಿಲ್ಲ.
ಲೋಕಸಭೆ ಚುನಾವಣೆಯ ದಿನಾಂಕವನ್ನು ಮಾರ್ಚ್ ಆರಂಭದಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ. ಚುನಾವಣೆಯ ಕಾರಣದಿಂದಾಗಿ ಐಪಿಎಲ್ ಪಂದ್ಯಗಳನ್ನು ಸಾಧ್ಯತೆ ಕುರಿತ ಪ್ರಶ್ನೆಗೆ ಉತ್ತರಿಸಿರುವ ಧುಮಾರ್, ಇದು ವಿದೇಶದಲ್ಲಿ ನಡೆಯುವುದಿಲ್ಲ. ಅದಕ್ಕಾಗಿಯೇ ನಾವು ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗಾಗಿ ಕಾಯುತ್ತಿದ್ದೇವೆ. ಅದಕ್ಕೆ ಅನುಗುಣವಾಗಿ ನಾವು ಸ್ಥಳ ನಿಯೋಜನೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.