ಬೆಳಗಾವಿ:- ಎಸ್ಡಿಎ ನೌಕರ ಬೆನ್ನಲ್ಲೇ ಈಗ ಎಎಸ್ಐ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪೂರ ಗ್ರಾಮದ ಮನೆಯಲ್ಲಿ ಜರುಗಿದೆ.
ಬಿಜೆಪಿ ಶಾಸಕರಿಗೆ ಏಕವಚನದಲ್ಲಿ ನಿಂದನೆ: ಆರ್ಟಿಓ ಇನ್ಸ್ಪೆಕ್ಟರ್ ಸಸ್ಪೆಂಡ್!
ಐಗಳಿ ಪೋಲಿಸ್ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶಂಭು ಮೆತ್ರಿ ಆತ್ಮಹತ್ಯೆ ಮಾಡಿಕೊಂಡವರು. ಶಂಭು ಮೆತ್ರಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿದಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಥಣಿ ಪೋಲಿಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
ಕಳೆದ ತಿಂಗಳೂ ಅಷ್ಟೇ ಬೆಳಗಾವಿ ತಹಶೀಲ್ದಾರ್ ಕೊಠಡಿಯಲ್ಲೇ ಎಸ್ಡಿಎ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದರು. ರುದ್ರಣ್ಣ ಯಡವಣ್ಣವರ ಎನ್ನುವ ದ್ವಿತೀಯ ದರ್ಜೆ ನೌಕರ ಬೆಳಗಾವಿ ತಹಶೀಲ್ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದರು. ವರ್ಗಾವಣೆ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇನ್ನು ಪ್ರಕರಣದದಲ್ಲಿ ಎ1 ತಹಶೀಲ್ದಾರ್ ಬಸವರಾಜ ನಾಗರಾಳ, ಎ2 ಅಶೋಕ ಕಬ್ಬಲಿಗೇರ್, ಇನ್ನು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು ಎ3 ಆರೋಪಿಯಾಗಿದ್ದರು
ಇದರ ಬೆನ್ನಲ್ಲೇ ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಮತ್ತೋರ್ವ ಸರ್ಕಾರಿ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದು ಅಚ್ಚರಿಗೆ ಕಾರಣವಾಗಿದೆ. ಎಎಸ್ಐ ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.