ಬೆಳಗಾವಿ:- ಕಳೆದ 3 ದಿನಗಳಿಂದ ನಾಪತ್ತೆಯಾಗಿದ್ದ ವಕೀಲ ಶವವಾಗಿ ಪತ್ತೆಯಾಗಿರುವ ಘಟನೆ ಅಥಣಿಯಲ್ಲಿ ಜರುಗಿದೆ.
56 ವರ್ಷದ ಸುಭಾಷ್ ಪಾಟಣಕರ ಮೃತ ದುರ್ದೈವಿ ಎನ್ನಲಾಗಿದೆ. ಡಿಸೆಂಬರ್ 3 ರಂದು ನಾಪತ್ತೆಯಾಗಿದ್ದ ಸುಭಾಷ್ ಮೃತದೇಹ ಅಥಣಿ ತಾಲೂಕಿನ ಹಲ್ಯಾಳ- ದರೂರ ಕೃಷ್ಣಾ ನದಿಯಲ್ಲಿ ಪತ್ತೆಯಾಗಿದೆ. ಎಸ್ಡಿಆರ್ಎಫ್, ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರ ತೆಗೆದಿದ್ದಾರೆ.
ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದನ್ನು ಪತ್ತೆಹಚ್ಚಲು ತನಿಖೆ ನಡೆಸುವಂತೆ ವಕೀಲರು ಆಗ್ರಹಿಸಿದ್ದಾರೆ