ಅಹಮದಾಬಾದ್:- ಹೆತ್ತ ತಾಯಿಯನ್ನೇ ಹತ್ಯೆ ಮಾಡಿ, ತನ್ನ ಕೃತ್ಯದ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿ ಮಗ Sorry ಕೇಳಿರುವ ಘಟನೆ ಜರುಗಿದ್ದು, ಕೊಲೆ ಆರೋಪದಲ್ಲಿ 21 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
Muda Scam: ಪ್ರಾಸಿಕ್ಯೂಷನ್ ಕೇಸ್ ಗೆ ರಾಷ್ಟ್ರಪತಿ ಎಂಟ್ರಿ; ರಾಜ್ಯ ಸಿ ಎಸ್ ಗೆ ಪತ್ರ!
ಗುಜರಾತ್ನಲ್ಲಿ ಈ ಘಟನೆ ನಡೆದಿದೆ. ಈ ಹೃದಯ ವಿದ್ರಾವಕ ಕಥೆಯನ್ನು ಕೇಳಿದವರೆಲ್ಲರೂ ಬೆಚ್ಚಿಬಿದ್ದಿದ್ದಾರೆ. ಅಮ್ಮ- ಮಗನ ಪರಿಶುದ್ಧ ಸಂಬಂಧವನ್ನು ಛಿದ್ರಗೊಳಿಸಿದ ಈ ಕತೆ ಕೇಳಿದರೆ ಶಾಕ್ ಆಗುವುದು ಗ್ಯಾರಂಟಿ. ಈ ಕೊಲೆ ಮಾಡಿದ ಬಳಿಕ ಆ ಯುವಕ ಅಮ್ಮನೊಂದಿಗಿನ ತನ್ನ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, ನಿನ್ನನ್ನು ಕೊಂದಿದ್ದಕ್ಕೆ ನನ್ನ ಕ್ಷಮಿಸಿ ಬಿಡು ಅಮ್ಮ ಎಂದು ಕ್ಯಾಪ್ಷನ್ ಹಾಕಿದ್ದಾನೆ.
ರಾಜ್ಕೋಟ್ನ ವಿಶ್ವವಿದ್ಯಾಲಯ ರಸ್ತೆಯಲ್ಲಿರುವ ಭಗತ್ ಸಿಂಗ್ ಗಾರ್ಡನ್ನಲ್ಲಿರುವ ಮನೆಯಲ್ಲಿ ಈ ಘಟನೆ ನಡೆದಿದ್ದು ಜ್ಯೋತಿಬೆನ್ ಗೋಸಾಯಿ(48) ಮೃತ ಮಹಿಳೆಯಾಗಿದ್ದು. ನೀಲೇಶ್ ಗೋಸಾಯಿ ಆರೋಪಿಯಾಗಿದ್ದಾನೆ.
ಅಪರಾಧ ಎಸಗಿದ ಬಳಿಕ ತನ್ನ ತಾಯಿಯ ಮೃತದೇಹದ ಫೋಟೋವನ್ನು ಇನ್ಸ್ಟಾಗ್ರಾಮ್ ನಲ್ಲಿ “ಕ್ಷಮಿಸಿ ತಾಯಿ ನಾನು ನಿನ್ನನ್ನು ಕೊಲ್ಲುತ್ತಿದ್ದೇನೆ, ನಾನು ನಿನ್ನನ್ನು ಕಳೆದುಕೊಳ್ಳುತ್ತೇನೆ, ಓಂ ಶಾಂತಿ” ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ ಹಾಕಿದ್ದಾನೆ. ಮತ್ತೊಂದು ಪೋಸ್ಟ್ನಲ್ಲಿ, “ನಾನು ನನ್ನ ತಾಯಿಯನ್ನು ಕೊಲ್ಲುತ್ತಿದ್ದೇನೆ, ನನ್ನ ಜೀವನ ಕಳೆದುಹೋಗಿದೆ, ಕ್ಷಮಿಸಿ ಅಮ್ಮ, ಓಂ ಶಾಂತಿ, ಮಿಸ್ ಯೂ ಅಮ್ಮ ” ಎಂದು ಬರೆದುಕೊಂಡಿದ್ದಾನೆ
ಇತ್ತ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಹತ್ತಿರದ ಮನೆಯವರು ಜ್ಯೋತಿಬೆನ್ ಮನೆಯ ಬಳಿ ಹೋದಾಗ ಮಗ ತನ್ನ ತಾಯಿಯ ಹೆಣದ ಜೊತೆ ಇರುವುದು ಕಂಡುಬಂದಿದೆ ಕೂಡಲೇ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಬಂದು ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಜ್ಯೋತಿಬೆನ್ ಅವರು ಹಲವು ವರ್ಷಗಳಿಂದ ತೀವ್ರ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ, ಇದು ತಾಯಿ ಮತ್ತು ಮಗನ ನಡುವೆ ಆಗಾಗ ಜಗಳಕ್ಕೆ ಕಾರಣವಾಗುತ್ತಿತ್ತು ಎನ್ನಲಾಗಿದೆ.
ಘಟನೆಯ ದಿನ ತಾಯಿ ಮತ್ತು ಮಗನ ನಡುವೆ ಜಗಳ ನಡೆದಿದ್ದು ಇದು ವಿಕೋಪಕ್ಕೆ ತಿರುಗಿ ಮಗ ಚಾಕುವಿನಿಂದ ಇರಿದು ಕೊಲ್ಲಲು ಮುಂದಾಗಿದ್ದಾನೆ ಆದರೆ ತಾಯಿ ತಡೆದಿದ್ದಾರೆ ಇದಾದ ಬಳಿಕ ಅಲ್ಲೇ ಇದ್ದ ಬಟ್ಟೆಯಿಂದ ಮುಖಕ್ಕೆ ಸುತ್ತಿ ಹತ್ಯೆ ಮಾಡಿ ಬಳಿಕ ತಾಯಿ ಜೊತೆ ಫೋಟೋ ತೆಗೆದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಮಾಡಿಕೊಂಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲು ಆಸ್ಪತ್ರೆಗೆ ಸಾಗಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ವಿಚಾರಣೆ ವೇಳೆ ನೀಲೇಶ್ ಮೊದಲು ಚಾಕುವಿನಿಂದ ಕೊಚ್ಚಿ ಕೊಲೆ ಮಾಡಲು ಯತ್ನಿಸಿದ್ದು, ತಾಯಿ ಆ ಚಾಕು ಕಿತ್ತುಕೊಂಡಿದ್ದರಿಂದ ರಕ್ತಸ್ರಾವ ಉಂಟಾಗಿದ್ದು ಬೆಳಕಿಗೆ ಬಂದಿದೆ. ಇದಾದ ಬಳಿಕ ತಾಯಿಯ ಬಾಯಿ ಹಾಗೂ ಗಂಟಲನ್ನು ಕಂಬಳಿಯಿಂದ ಒತ್ತಿ ಹತ್ಯೆ ಮಾಡಿದ್ದಾನೆ.
ಕೊಲೆಯಾದ ನಂತರ ಆತ ತನ್ನ ಸ್ನೇಹಿತ ಭರತ್ಗೆ ಮಾಹಿತಿ ನೀಡಿದ್ದು, ಆತ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ನೀಲೇಶ್ನ ಮೃತ ತಾಯಿ ಜ್ಯೋತಿಬೆನ್ ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥಳಾಗಿದ್ದು, ಆಗಾಗ ಜಗಳ ನಡೆಯುತ್ತಿತ್ತು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.