ಹುಬ್ಬಳ್ಳಿ:– ಮಹಿಳೆಗೆ ಚಾಕು ಇರಿದಿದ್ದ ಆರೋಪಿ ಕಾಲಿಗೆ ಗುಂಡೇಟು ಹಾಕಿದ ಘಟನೆ ಹುಬ್ಬಳ್ಳಿಯಲ್ಲಿ ಜರುಗಿದೆ.
ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗಿದ್ಯಾ!? ಹಾಗಿದ್ರೆ ತಡೆಯಲು ಹೀಗೆ ಮಾಡಿ!
ಗಾಯಾಳು ಮಹಿಳೆ ನೀಲಾ ಹಂಪಣ್ಣವರ್ ಮಗಳಿಗೆ ಮದುವೆಯಾಗುವಂತೆ ಪೀಡಿಸುತ್ತಿದ್ದ. ಈ ಹಿನ್ನಲೆ ನೀಲಾ ಅವರು ಮಹೇಶ್ಗೆ ಬುದ್ಧಿವಾದ ಹೇಳಿದ್ದರು. ಅಷ್ಟಕ್ಕೆ ಕೋಪಗೊಂಡ ಆರೋಪಿ ಮಹೇಶ್, ಮಹಿಳೆಗೆ ಚಾಕು ಇರಿದಿದ್ದ. ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದರು
ವಿಚಾರಣೆ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗುವಾಗ ಕಾಲಿಗೆ ಗುಂಡೇಟು ಹೊಡೆಯಲಾಗಿದೆ.
ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳು ಮಹೇಶ್ಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಶಶಿಕುಮಾರ್ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಅವರು, ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಹುಬ್ಬಳ್ಳಿಯ ಲೂಹಿಯಾ ನಗರದಲ್ಲಿರುವ ನೀಲಾ ಹಂಪಣ್ಣವರ ಮನೆಗೆ ನುಗ್ಗಿ ಆತ ಚಾಕು ಹಾಕಿದ್ದಾನೆ. ಸಿಕ್ಕ ಸಿಕ್ಕವರಿಗೆ ಬೆದರಿಕೆ ಕೂಡ ಹಾಕಿದ್ದ. ಗಾಯಾಳು ನೀಲಾ ಹಂಪಣ್ಣನವರಿಗೆ ಒಟ್ಟು ಐದು ಜನ ಹೆಣ್ಣುಮಕ್ಕಳು ಇದ್ದಾರೆ. ಅವರ ಮಗಳೋರ್ವಳಿಗೆ ಮದುವೆಯಾಗುವಂತೆ ಒತ್ತಾಯ ಮಾಡಿದ್ದ. ಕಳೆದ ಐದು ವರ್ಷದ ಹಿಂದೆ ಇದನ್ನು ಸರಿ ಮಾಡಲಾಗಿತ್ತು.
ಆದರೆ, ಆರೋಪಿ ಐದು ವರ್ಷದಿಂದ ಅವಳ ಪ್ರತಿಯೊಂದು ಚಲನವಲನವನ್ನು ಗಮನಿಸುತ್ತಿದ್ದ. ಇಂದು ನೀಲಾ ಹಂಪಣ್ಣವರ್ ಮನೆಗೆ ನುಗ್ಗಿ ಚಾಕು ಇರಿದಿದ್ದಾನೆ. ಅದೃಷ್ಟವಶಾತ್ ಪ್ರಾಣಾಪಯದಿಂದ ಪಾರಾಗಿದ್ದಾರೆ ಎಂದು ಹೇಳಿದ್ದಾರೆ.