ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಸಮುದ್ರದ ಆಳದಲ್ಲಿ ನವಿಲುಗರಿ ನೆಟ್ಟರೆ ಚಿಗುರುತ್ತಾ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಮಜುನ ಖರ್ಗೆ ವ್ಯಂಗ್ಯವಾಡಿರುವುದಕ್ಕೆ ಭಾರತೀಯ ಜನತಾ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಖರ್ಗೆಯವರು, “ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಿರುವ ಅಭಿವೃದ್ಧಿ ಯೋಜನೆಗಳೆಲ್ಲಾ ದೇಶಕ್ಕೆ ಯಾವುದೇ ರೀತಿಯಲ್ಲೂ ಅನುಕೂಲವಾಗುವಂಥವಲ್ಲ’’ ಎಂದು ಹೇಳಿದ್ದರು.
ಅದಕ್ಕೆ ಶೆಟ್ಟರ್ ಅವರು ಹೀಗೆ ಪ್ರತಿಕ್ರಿಯಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, “ಮಲ್ಲಿಕಾರ್ಜುನ ಖರ್ಗೆ ಟೀಕೆಗೆ ಅರ್ಥವೇ ಇಲ್ಲ. ನಮ್ಮ ಧರ್ಮ, ಸಂಸ್ಕೃತಿ, ಪರಂಪರೆಯನ್ನು ಉಳಿಸುವ ಕೆಲಸವನ್ನು ಮೋದಿ ಮಾಡುತ್ತಿದ್ದಾರೆ. ಇಡೀ ದೇಶ ಆರಾಧನೆ ಮಾಡುವ ಪವಿತ್ರ ಸ್ಥಳಗಳನ್ನು ಅಭಿವೃದ್ಧಿ ಮಾಡುತ್ತಿದ್ದಾರೆ’’ ಎಂದು ಹೇಳಿದರು.
Health Tips: ದಿನಕ್ಕೊಂದು ಕಿವಿ ಹಣ್ಣು ತಿಂದ್ರೆ ಸಾಕು ಈ ಸಮಸ್ಯೆಗಳು ಬರಲ್ಲ..!
ಕಳಸಾ ಬಂಡೂರಿ ಯೋಜನೆ ವಿಳಂಬ ವಿಚಾರಕ್ಕೆ ಸಂಬಂಧಿಸಿ ಮಾತನಾಡಿ, “ಮನೋಹರ್ ಪರಿಕ್ಕರ್ ಗೋವಾ ಸಿಎಂ ಇದ್ದಾಗ ಯೋಜನೆ ಅನುಷ್ಠಾನಕ್ಕೆ ಪ್ರಯತ್ನಿಸಿದೆ. ಮನೋಹರ್ ಪರಿಕ್ಕರ್ ಮನವೊಲಿಕೆ ಸಹ ಆಗಿತ್ತು. ಆದರೆ, ಆ ವೇಳೆ ಗೋವಾ ಕಾಂಗ್ರೆಸ್ನವರೇ ವಿರೋಧ ಮಾಡಿದ್ದರು. ಅಲ್ಲಿನ ಕಾಂಗ್ರೆಸ್ ನಾಯಕರಿಗೆ ತಿಳಿಹೇಳಿ ಅಂತ ಕರ್ನಾಟಕ ಕಾಂಗ್ರೆಸ್ ನಾಯಕರಿಗೂ ಹೇಳಿದ್ದೆ. ಕೆಲವರಿಂದಾಗಿ ಇದು ವಿಳಂಬವಾಗುತ್ತಿದೆ. ಅದನ್ನು ಸರಿ ಮಾಡುವ ಕೆಲಸ ಮಾಡುತ್ತೇವೆ’’ ಎಂದು ಹೇಳಿದರು.