ಭಾರತ ತಂಡದ ಮಾಜಿ ನಾಯಕ ಹಾಗೂ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಕೋಟಿ-ಕೋಟಿ ವಂಚಿಸಿದ ಆರೋಪದಡಿ ಪ್ರಕರಣ ದಾಖಲಾಗಿದೆ.
ವಾಣಿಜ್ಯ ನಗರಿಯಲ್ಲಿ ಬೃಹತ್ ತಿರಂಗಾ ಬೈಕ್ ರ್ಯಾಲಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಾಥ್
ಕ್ರಿಕೆಟ್ ಅಕಾಡೆಮಿಯನ್ನು ನಿರ್ವಹಿಸುವ ವಿಚಾರದಲ್ಲಿ ಸ್ವತಃ ಧೋನಿ ತಮಗೆ 15 ಕೋಟಿ ವಂಚನೆ ಮಾಡಿದ್ದಾರೆಂದು ಉತ್ತರ ಪ್ರದೇಶದ ಅಮೇಥಿಯ ರಾಜೇಶ್ ಕುಮಾರ್ ಮೌರ್ಯ ಎಂಬುವವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಬಿಸಿಸಿಐ ಎಥಿಕ್ಸ್ ಕಮಿಟಿ ನಿಯಮ 36ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆಗಸ್ಟ್ 30ರೊಳಗೆ ವಿವರಣೆ ನೀಡುವಂತೆ ಧೋನಿಗೆ ಸೂಚನೆ ನೀಡಿದ್ದಾರೆ.
2021 ರಲ್ಲಿ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿ ಕ್ರಿಕೆಟ್ ಅಕಾಡೆಮಿಯನ್ನು ನಡೆಸಲು ಒಪ್ಪಂದಕ್ಕೆ ಸಹಿ ಹಾಕಿದೆ. ನಂತರ, ಈ ಒಪ್ಪಂದದ ಬಗ್ಗೆ ವಿವಾದಗಳು ಹುಟ್ಟಿಕೊಂಡಿದ್ದವು. ಒಪ್ಪಂದದ ಪ್ರಕಾರ ಆರ್ಕಾ ಕಂಪನಿ ತನಗೆ ನೀಡಬೇಕಾದ ಮೊತ್ತವನ್ನು ಪಾವತಿಸಿಲ್ಲ ಎಂದು ಧೋನಿ ನ್ಯಾಯಾಲಯದ ಮೆಟ್ಟಿಲೇರಿದ್ದರು.
ಆ ಸಂಸ್ಥೆ ತಮಗೆ ಸುಮಾರು ₹15 ಕೋಟಿ ವಂಚನೆ ಮಾಡಿದೆ ಎಂದು ಅರ್ಕಾ ಸ್ಪೋರ್ಟ್ಸ್ ಕಂಪನಿ ಮಾಲೀಕ ಮಿಹಿರ್ ದಿವಾಕರ್, ವ್ಯವಹಾರ ನಡೆಸುತ್ತಿದ್ದ ಸೌಮ್ಯ ದಾಸ್ ಮತ್ತು ಅರ್ಕಾ ಸ್ಪೋರ್ಟ್ಸ್ ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ವಂಚನೆ ಆರೋಪ ಮಾಡಲಾಗಿತ್ತು. ರಾಂಚಿ ಸಿವಿಲ್ ಕೋರ್ಟ್ನಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಸದ್ಯ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಆದರೆ ಇದೀಗ ಅದೇ ಸಂಸ್ಥೆಗೆ ಸೇರಿದ ರಾಜೇಶ್ ಕುಮಾರ್ ತಮಗೆ ಧೋನಿ ಮೋಸ ಮಾಡಿದ್ದಾರೆ ಎಂದು ಬಿಸಿಸಿಐಗೆ ದೂರು ನೀಡಿದ್ದಾರೆ.