ಲೀಗ್ ಸುತ್ತಿನ ಮೊದಲ 10 ಪಂದ್ಯಗಳಲ್ಲಿ ದಾಖಲೆಯ 35 ಕೋಟಿ ವೀಕ್ಷಣೆ ಕಂಡಿದೆ. ಕೋವಿಡ್ ಬಳಿಕ ಸ್ಟಾರ್ ಸ್ಫೋರ್ಟ್ಸ್ನಲ್ಲಿ (Star Sports) ಐಪಿಎಲ್ ಟೂರ್ನಿಯ ಮೊದಲ 10 ಪಂದ್ಯಗಳನ್ನು 35 ಕೋಟಿ ಮಂದಿ ವೀಕ್ಷಣೆ ಮಾಡಿದ್ದಾರೆ. ಇದು ಹಿಂದಿನ ಎಲ್ಲಾ ದಾಖಲೆಗಳನ್ನ ನುಚ್ಚುನೂರು ಮಾಡಿದೆ. ಬಾರ್ಕ್ (BARC) ದತ್ತಾಂಶಗಳನ್ನು ಉಲ್ಲೇಖಿಸಿ ಸ್ಟಾರ್ಸ್ಫೋರ್ಟ್ಸ್ ಮಾಹಿತಿ ಹಂಚಿಕೊಂಡಿದೆ.
ಅಲ್ಲದೇ ಟಿವಿಯಲ್ಲಿ ಪಂದ್ಯಾವಳಿಯ ಒಟ್ಟು ವೀಕ್ಷಣೆ ಸಮಯವು 8,028 ಕೋಟಿ ನಿಮಿಷಗಳಷ್ಟು ತಲುಪಿದೆ. ಇದು ಕಳೆದ ವರ್ಷಕ್ಕಿಂತ 20% ಹೆಚ್ಚಳವಾಗಿದೆ. ಅಲ್ಲದೇ ಹಿಂದಿನ ಎಲ್ಲಾ ಆವೃತ್ತಿಗಳಿಗೆ ಹೋಲಿಸಿದರೆ, 17ನೇ ಆವೃತ್ತಿಯ ಐಪಿಎಲ್ ಪಂದ್ಯದ ರೇಟಿಂಗ್ಗಳು 22% ರಷ್ಟು ಏರಿಕೆಯಾಗಿದೆ ಎಂದು ಡಿಸ್ನಿ ಪ್ಲಸ್ ಹಾಟ್ಸ್ಟಾರ್ನ ಕ್ರೀಡಾ ವಿಭಾಗದ ಮುಖ್ಯಸ್ಥ ಸಂಜೋಗ್ ಗುಪ್ತಾ ತಿಳಿಸಿದ್ದಾರೆ.
17ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಕಳೆದ ಮಾರ್ಚ್ 22ರಂದು ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಆರ್ಸಿಬಿ ನಡುವಿನ ಉದ್ಘಾಟನಾ ಪಂದ್ಯವನ್ನು ಸುಮಾರು 16.8 ಕೋಟಿ ಮಂದಿ ವೀಕ್ಷಣೆ ಮಾಡಿದ್ದರು. ಮೊದಲ 6 ಪಂದ್ಯಗಳನ್ನು ಜಿಯೋ ಸಿನಿಮಾದಲ್ಲಿ ಆಪ್ನಲ್ಲಿ 20 ಕೋಟಿ ಮಂದಿ ವೀಕ್ಷಿಸಿದ್ದರು.