ಇಂಡಿಯನ್ ಪ್ರೀಮಿಯರ್ ಲೀಗ್ನ 7ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದೆ.
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ನ (IPL 2024) 7ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಚೆನ್ನೈ ಸೂಪರ್ ಕಿಂಗ್ಸ್ ಮೊದಲು ಬ್ಯಾಟ್ ಮಾಡಲಿದೆ.
ಟಿಕೆಟ್ ಘೋಷಣೆ ಬೆನ್ನಲ್ಲೇ ಕ್ಲೀನ್ ಶೇವ್ ಮಾಡಿ ಸ್ಮಾರ್ಟ್ ಆದ ಡಾ. ಕೆ ಸುಧಾಕರ್!
ಕಳೆದ ಬಾರಿಯ ಫೈನಲ್ ಪಂದ್ಯದ ಬಳಿಕ ಉಭಯ ತಂಡಗಳು ಇದೇ ಮೊದಲ ಬಾರಿ ಮುಖಾಮುಖಿಯಾಗುತ್ತಿದ್ದು, ಹೀಗಾಗಿ ಈ ಪಂದ್ಯದಲ್ಲೂ ರೋಚಕ ಪೈಪೋಟಿ ನಿರೀಕ್ಷಿಸಬಹುದು. ಆದರೆ ಈ ಬಾರಿ ಎರಡೂ ತಂಡಗಳು ಕೂಡ ಹೊಸ ನಾಯರುಗಳೊಂದಿಗೆ ಕಣಕ್ಕಿಳಿಯುತ್ತಿರುವುದು ವಿಶೇಷ.
ಅಂದರೆ ಕಳೆದ ಬಾರಿ ಫೈನಲ್ ಆಡುವಾಗ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕ್ಯಾಪ್ಟನ್ ಆಗಿ ಮಹೇಂದ್ರ ಸಿಂಗ್ ಧೋನಿ ಕಾಣಿಸಿಕೊಂಡಿದ್ದರು. ಇದೀಗ ಉಭಯ ತಂಡಗಳ ನಾಯಕರುಗಳು ಬದಲಾಗಿದ್ದು, ಅದರಂತೆ ಸಿಎಸ್ಕೆ ತಂಡವನ್ನು ರುತುರಾಜ್ ಗಾಯಕ್ವಾಡ್ ಹಾಗೂ ಗುಜರಾತ್ ಟೈಟಾನ್ಸ್ ತಂಡವನ್ನು ಶುಭ್ಮನ್ ಗಿಲ್ ಮುನ್ನಡೆಸುತ್ತಿದ್ದಾರೆ. ಹೀಗಾಗಿ ಯುವ ನಾಯಕರುಗಳಿಗೆ ಇದು ಪ್ರತಿಷ್ಠೆಯ ಪಂದ್ಯವಾಗಿ ಮಾರ್ಪಟ್ಟಿದೆ.