ಬೆಂಗಳೂರು: ಸುವರ್ಣ ವಿಧಾನ ಸೌಧದಲ್ಲಿ ಎಂಎಲ್ಸಿ ಸಿಟಿ ರವಿ ಮೇಲೆ ಹಲ್ಲೆಗೆ ಯತ್ನ ಪ್ರಕರಣ ಸಂಬಂಧ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಠಾಣೆಯಲ್ಲಿ 10 ಜನ ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸೆಕ್ರೆಟರಿ ಕಚೇರಿಯಿಂದ ಕಮಿಷನರ್ ಕಚೇರಿಗೆ ದೂರಿನ ಪತ್ರ ಸಲ್ಲಿಕೆಯಾಗಿತ್ತು. ಎಂಎಲ್ಸಿ ಡಿಎಸ್.ಅರುಣ್, ಎಸ್ವಿ ಸಂಕನೂರ, ಕಿಶೋರ್ ಬಿಆರ್ ಬೆಂಗಳೂರಿನ ಸೆಕ್ರೆಟರಿ ಕಚೇರಿಗೆ ದೂರು ಸಲ್ಲಿಸಿದ್ದರು.
Raw Banana: ಬಾಳೆಕಾಯಿ ಸೇವನೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಅನ್ನೋದು ನಿಮಗೆ ಗೊತ್ತಾ..?
ಅಲ್ಲಿಂದ ಬೆಳಗಾವಿ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಪತ್ರ ರವಾನೆಯಾಗಿತ್ತು. ಅದರಂತೆ, ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಐಪಿಸಿ ಸೆಕ್ಷನ್ 189(2), 191(2), 126(2), 352, 351(4) ಕಲಂ ಹಾಗೂ 190ರ ಅಡಿ ದೂರು ಎಫ್ಐಆರ್ ದಾಖಲಿಸಲಾಗಿದೆ.