ಬೆಳಗಾವಿ ; ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶೀಘ್ರ ಗುಣಮುಖರಾಗಲಿ ಎಂದು ಮಾಜಿ ಸಚಿವ ಸಿ.ಟಿ ರವಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕಳೆದ ತಿಂಗಳು ಅಶ್ಲೀಲ ಪದಬಳಕೆ ವಿಚಾರವಾಗಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಸಿ.ಟಿ ರವಿ ಮಧ್ಯೆ ವಾಗ್ವಾದ ನಡೆದಿತ್ತು. ಸಧ್ಯ ಈ ಎಲ್ಲಾ ಬೆಳವಣಿಗೆ ಮಧ್ಯೆ ಸಿ.ಟಿ ರವಿ ಹೆಬ್ಬಾಳಕರ್ ಅವರ ಆರೋಗ್ಯದ ಕುರಿತು ಹಾರೈಸಿದ್ದಾರೆ.
ಇಂದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಅವರ ಸಹೋದ ಶೀಘ್ರ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥಿಸುವೆ ಎಂದು ಸಿ.ಟಿ ರವಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.