ಹುಬ್ಬಳ್ಳಿ:- ಕೋವಿಡ್ನಲ್ಲಿ ಮೃತ ಪಟ್ಟ ಕುಟುಂಬಸ್ಥರ ಶಾಪ ಬಿಜೆಪಿಗೆ ತಟ್ಟುತ್ತದೆ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ವಕ್ಫ್ ವಿವಾದ: ಸಚಿವ ಜಮೀರ್ ಅಹಮ್ಮದ್ ಖಾನ್ ಬಿಗ್ ಶಾಕ್ ಕೊಟ್ಟ ರಾಜ್ಯಪಾಲ!
ಕೋವಿಡ್ನಲ್ಲಿ ಮೃತ ಪಟ್ಟ ಕುಟುಂಬಸ್ಥರ ಶಾಪ ಬಿಜೆಪಿಗೆ ತಟ್ಟುತ್ತದೆ. ಕೇಂದ್ರ ಬಿಜೆಪಿ ಸರ್ಕಾರ ಸರ್ವಾಧಿಕಾರಿ. ಸಿಬಿಐ, ಐಟಿ, ಚುನಾವಣೆ ಆಯೋಗ ಎಲ್ಲಾ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡಿದೆ. ಈಗ ನ್ಯಾಯಾಂಗದಲ್ಲೂ ಹಸ್ತಕ್ಷೇಪ ಮಾಡುವುದಕ್ಕೆ ಹೊರಟಿದ್ದಾರೆ. ಬಿಜೆಪಿಯ ಹಿಟ್ಲರ್ ಶಾಹಿ ಮುಂದೆ ನಡೆಯುವುದಿಲ್ಲ ಎಂದು ಹರಿಹಾಯ್ದರು.
ಕೋವಿಡ್ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. 2000 ಇಂಜೆಕ್ಷನ್ 30 ಸಾವಿರಕ್ಕೆ ಕಾಳ ಸಂತೆಯಲ್ಲಿ ಮಾರಾಟ ಆಗಿದೆ. ಯಾರ ಕಾಲದಲ್ಲಿ ಇದೆಲ್ಲಾ ಆಗಿದ್ದು ಎಂದು ನಿಮಗೆಲ್ಲಾ ಗೊತ್ತಿದೆ. ಇವರ ದುರಾಡಳಿತದಿಂದ ಸಾವಿರಾರು ಜನ ಮೃತಪಟ್ಟಿದ್ದಾರೆ. ಜನರ ಶಾಪ ಬಿಜೆಪಿಯವರಿಗೆ ತಟ್ಟುತ್ತದೆ ಎಂದರು.
ಮೋದಿ, ಅಮಿತ್ ಶಾ, ಬಿಜೆಪಿ ವಿರುದ್ಧ ಮಾತನಾಡಿದವರನ್ನು ಜೈಲಿಗೆ ಹಾಕಿದ್ದನ್ನು ನೋಡಿದ್ದೇವೆ. ಕಾಂಗ್ರೆಸ್ ಆ ರೀತಿ ಮಾಡುವುದಿಲ್ಲ, ಮಾಡಿದರೆ ಪ್ರಜಾಪ್ರಭುತ್ವ ಉಳಿಯುತ್ತಿರಲಿಲ್ಲ ಎಂದು ಹೇಳಿದರು.