ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷಗಳ ಸಭೆ ಭಾನುವಾರ ಸಂಜೆ ಜರುಗಿತು.
ವಾಲ್ಮೀಕಿ ಸ್ಕ್ಯಾಮ್ ಬಳಿಕ ವಕ್ಫ್ ಬೋರ್ಡ್ನಲ್ಲೂ ಕೋಟ್ಯಂತರ ರೂ. ಹಣ ಅಕ್ರಮ!
ಸಭೆಯಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ, ಸಚಿವ ಸಂಪುಟದ ಸದಸ್ಯರುಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರು, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಸುಪ್ರೀಂ ಕೋರ್ಟ್ ಹಿರಿಯ ವಕೀಲ ಮೋಹನ್ ಕಾತರಕಿ, ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ನೀರಾವರಿ ಹಾಗೂ ಕಾನೂನು ತಜ್ಞರು ಮತ್ತು ಹಿರಿಯ ಅಧಿಕಾರಿಗಳು ಸೇರಿದಂತೆ ಅನೇಕರು ಭಾಗವಹಿಸಿದ್ದರು.