ಚಿತ್ರದುರ್ಗ: ದಕ್ಷಿಣ ಭಾರತದ ರಾಜ್ಯಗಳಲ್ಲಿ ಫೆಂಗಲ್ ಚಂಡಮಾರುತದ ಆರ್ಭಟ ಜೋರಾಗಿದೆ. ಕರ್ನಾಟಕದಲ್ಲೂ ಈ ಚಂಡಮಾರುತ ಪರಿಣಾಮವಾಗಿ ಮಲೆನಾಡು, ಕರಾವಳಿ, ಬೆಂಗಳೂರು, ಚಿಕ್ಕಬಳ್ಳಾಪುರ, ಕೊಡಗು ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ. ಅದರಂತೆ ಚಿತ್ರದುರ್ಗದಲ್ಲಿ ಪಕ ಮಳೆಯಾಗುತ್ತಿದೆ. ಸೋಮವಾರ ರಾತ್ರಿಯಿಂದ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಎಲ್ಲಾ ಅಂಗನವಾಡಿ,
ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ!
ಶಾಲೆಗಳು ಹಾಗೂ ಪಿಯುಸಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಿಸಿ ಚಿತ್ರದುರ್ಗ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್ ಆದೇಶ ಹೊರಡಿಸಿದ್ದಾರೆ. ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ಮೇರೆಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತಾ ಹಿತದೃಷ್ಟಿಯಿಂದ ಜಿಲ್ಲಾಡಳಿತ ಶಾಲೆಗಳಿಗೆ ರಜೆ ಘೋಷಿಸಿದೆ.