ಬೆಂಗಳೂರು: ಬೆಂಗಳೂರಿನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ ಮೂವರು ಗಾಯಗೊಂಡಿದ್ದಾರೆ.ನಗರದ ಹೊರವಲಯದ ಆನೇಕಲ್ ಬಳಿಯ ಕಾಚನಾಯಕನಹಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಈ ಅವಘಡ ಸಂಭವಿಸಿದ್ದು, ಅಸ್ಸಾಂ ಮೂಲದ ಮೂವರು ಗಂಭೀರ ಗಾಯಗಳಾಗಿವೆ. ಬದನ್ ದಾಸ್, ದಯಾಲ್, ಗುಲಾಭ್ ಗೆ ಗಾಯವಾಗಿದೆ. ಈ ಮೂವರು ಯುವಕರು ರಮೇಶ್ ಎಂಬುವವರ ಮನೆಯಲ್ಲಿ ಬಾಡಿಗೆಗಿದ್ದರು. ,ಐಕಾನ್ ಲೇಔಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಗಳಾಗಿ ಕೆಲಸ ಮಾಡುತ್ತಿದ್ದರು. ರಾತ್ರಿ ಮನೆಯಲ್ಲಿ ಎಣ್ಣೆ ಪಾರ್ಟಿ ಮಾಡಿ, ಮತ್ತಿನಲ್ಲೇ ಸಿಲಿಂಡರ್ ಕೂಡ ಅಪ್ ಮಾಡದೆ ಹಾಗೆ ಮಲಗಿದ್ದಾರೆ. ಬೆಳಗ್ಗೆ ಎದ್ದು ಲೈಟ್ ಹಾಕುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಮನೆಯಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿದ್ದು,ನಾರಾಯಣ ಹೆಲ್ತ್ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಸೂರ್ಯಸಿಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.