ಬೆಂಗಳೂರು:- ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಳೂರು ಬಳಿ ಮನೆಯೊಂದರ ಬಳಿ ಸಿಲಿಂಡರ್ ಸ್ಫೋಟಗೊಂಡು ಓರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಜರುಗಿದೆ.
ದಿನೇಶ್ ದಾಸ್ಗೆ ಗಂಭೀರ ಗಾಯಗೊಂಡ ವ್ಯಕ್ತಿ. ಮನೆಯಲ್ಲಿ ಗ್ಯಾಸ್ ಸೋರಿಕೆಯಿಂದ ಬೆಳಗ್ಗೆ 7 ಗಂಟೆ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆ ಛಾವಣಿಯೇ ಚಿಂದಿ ಚಿಂದಿಯಾಗಿದೆ. ಈ ವೇಳೆ ಮನೆಯಲ್ಲಿದ್ದ ದಿನೇಶ್ ದಾಸ್ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.