ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ಸಿಕ್ಕ ವಿಚಾರವಾಗಿ ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಪ್ರಾಸಿಕ್ಯೂಷನ್ ವೈಪಲ್ಯವಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನ್ಯಾಯಾಲಯದ ತೀರ್ಪನ್ನ ಗೌರವಿಸಬೇಕು. ಆದರೆ ನಾವು ಅದನ್ನ ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೆವೆ.
ಅಲ್ಲದೆ ಪ್ರಾಸಿಕ್ಯೂಷನ್ ವೈಪಲ್ಯ ಎಂಬುದು ವಿಚಾರಣೆ ಪೂರ್ಣಗೊಂಡ ಬಳಿಕ ನಿರ್ಧಾರ ಆಗುತ್ತೆ. ಜಾಮೀನುಸಿಕ್ಕ ಮಾತ್ರಕ್ಕೆ ಪ್ರಾಸಿಕ್ಯೂಷನ್ ವೈಫಲ್ಯ ಆಗುವುದಿಲ್ಲ. ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಹೇಳಿಕೆ ಕೊಟ್ಟಿದ್ದಾರೆ.