ಮೈಸೂರು: ಸಿದ್ದರಾಮಯ್ಯ ತಮ್ಮ ಮಗನ ಹೆಗಲ ಮೇಲೆ ಬಂದೂಕು ಇಟ್ಟು ಡಿ.ಕೆ.ಶಿವಕುಮಾರ್ ಎದೆಗೆ ಗುಂಡು ಹೊಡೆಯುತ್ತಿದ್ದಾರೆ ಎಂದು ಸಂಸದ ಪ್ರತಾಪ ಸಿಂಹ ಆರೋಪಿಸಿದರು. ನಗರದಲ್ಲಿ ಸುದ್ದಿಗಾರ ರೊಡನೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ನೋಡಿದರೆ ಅಯ್ಯೋ ಪಾಪ ಅನ್ನಿಸುತ್ತೆ. ಎಸ್.ಎಂ. ಕೃಷ್ಣ ಬಳಿಕ ಮತ್ತೊಮ್ಮೆ ಸಿಎಂ ಆಗುವ ಅವಕಾಶ ನಿಮ್ಮ ಮನೆ ಬಾಗಿಲಿಗೆ ಬಂದಿದೆ ಎಂದು ಹಳೇ ಮೈಸೂರು ಭಾಗದಲ್ಲಿ ಪ್ರಚಾರ ಮಾಡಿದ್ದರು.
ಆದರೆ ಸಿದ್ದರಾಮಯ್ಯ ಸಿಎಂ ಚೇರ್ಗೆ ಬಂದು ಕುಳಿತ ಮೇಲೆ ವರಸೆ ಬದಲಾಗಿದೆ. ಮೊದಲು ಎಂ.ಬಿ.ಪಾಟೀಲ್ ಬಾಯಿಂದ ಐದು ವರ್ಷ ನಾನೇ ಸಿಎಂ ಅಂತ ಹೇಳಿಸಿದ್ದರು. ನಂತರ ಸತೀಶ್ ಜಾರಕಿಹೊಳಿ, ಜಮೀರ್ ಅಹಮದ್, ಕೆ.ಎನ್. ರಾಜಣ್ಣ ಅವರಿಂದ ಹೇಳಿಕೆ ಕೊಡಿಸಿದ್ದಾರೆ. ಸ್ವತಃ ಸಿದ್ದರಾಮಯ್ಯ ಅವರೇ ನಾನೇ ಐದು ವರ್ಷ ಸಿಎಂ ಅಂತ ಹೇಳಿದ್ದಾಗಿದೆ. ಈಗ ಮಗನ ಮೂಲಕ ಹೇಳಿಸುತ್ತಿದ್ದಾರೆ ಎಂದರು.